ಬೆಂಗಳೂರು, ಜು.5:
ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಛೇರಿಗಳು ಸೇರಿದಂತೆ ಅಧೀನಕ್ಕೊಳಪಡುವ ಎಲ್ಲಾ ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ / ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿರುತ್ತದೆ.


ಅದಾಗ್ಯೂ ಹಲವಾರು ಕಛೇರಿಯನ್ನೊಳಗೊಂಡಂತೆ ಅಧೀನ ಸಂಸ್ಥೆಗಳಲ್ಲಿ ಪ್ರಸ್ತುತದವರೆಗೂ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿವೆ. ಈ ನಿಟ್ಟಿನಲ್ಲಿ ತಮ್ಮ ಇಲಾಖೆಯ ಅಧೀನಕ್ಕೊಳಪಡುವ ಸರ್ಕಾರಿ ಕಛೇರಿಗಳು ಸೇರಿದಂತೆ ಅಧೀನ ಸಂಸ್ಥೆ/ನಿಗಮ/ಮಂಡಳಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಿರುವ ಬಗ್ಗೆ ನಾಳೆಯೊಳಗಾಗಿ ಈ ಕಛೇರಿಗೆ ವರದಿ ಕಳುಹಿಸುವಂತೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!