ಭದ್ರಾವತಿ,ಜ.19:
ಇಲ್ಲಿನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಇಂದು ಮಧ್ಯಾಹ್ನದ ವೇಳೆಗೆ ದಾಳಿ ನಡೆದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಣು(36) ಎನ್ನುವವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಶಾಮಿಯಾನ ಅಂಗಡಿಯೊಂದರ ಜಿಎಸ್’ಟಿ ನೋಂದಣಿಗಾಗಿ 2500 ರೂ. ಲಂಚ ಸ್ವೀಕರಿಸುತ್ತಿದ್ದ ವೇಣುನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಎಸಿಬಿ ಡಿವೈಎಸ್’ಪಿ ಲೋಕೇಶ್ ನೇತೃತ್ವದ ತಂಡದಲ್ಲಿ, ಅಧಿಕಾರಿ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ್, ರಘುನಾಯ್ಕ್, ನಾಗರಾಜ್, ಸುರೇಂದ್ರ, ಹರೀಶ್, ಯೋಗೀಸ್ ಸೇರಿದಂತೆ ಇತರರಿದ್ದರು.