ಶಿವಮೊಗ್ಗ, ಜುಲೈ 09, : ತುಂಗಾ ಬಲದಂಡೆ ಮತ್ತು ಎಡದಂಡೆ ಕಾಲುವೆಯಲ್ಲಿ 2024-25ನೇ ಸಾಲಿನ ಮುಂಗಾರು ಬೆಳೆಗೆ ಜು.10 ರಿಂದ ನೀರು ಹರಿಸಲಾಗುತ್ತಿದ್ದು, ಅಚ್ಚುಕಟ್ಟು ಪ್ರದೇಶದ ರೈತರು,

ಸಾರ್ವಜನಿಕರು, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟೆಕೆಗಳನ್ನು

ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ನಿಗಮದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.