ಶಿವಮೊಗ್ಗ, ಜುಲೈ ೨೦,: ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯು ೨೦೨೪-೨೫ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ
ಪಡೆಯುವ ಸಾವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ರಾಜ್ಯ ಸರ್ಕಾರದಿಂದ ಶೇ. ೬ರ ಬಡ್ಡಿ ಸಹಾಯಧನ ನೀಡಲಾಗುವುದು.
ಈ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುವಿಗಳಿಗೆ ಗರಿಷ್ಟ ರೂ. ೬೫,೦೦೦/- ಸಾಲದ ಮೊತ್ತಕ್ಕೆ ಶೇ. ೬ರ ಬಡ್ಡಿ ಸಹಾಯಧನ ನೀಡಲಾಗುತ್ತಿದ್ದು,
ರೈತ ಮಹಿಳೆಯರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ|| ಬಾಬುರತ್ನ ಎ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಯನ್ನು ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಹಾಗೂ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವುದು.