ಶಿವಮೊಗ್ಗ, ಜು.23:
ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ನೀಡುವಂತೆ ಅನುದಾನ ರಹಿತ ಶಾಲಾ ಶಿಕ್ಷಕರಿಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಲ್ಪಿಸಿ ಕೊಡಬೇಕೆಂಬ ವಿಧಾನ ಪರಿಷತ್ ಶಾಸಕ ಭೋಜೇಗೌಡ ಅವರ ಮನವಿಗೆ
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವರಿಗೆ ಶಿವಮೊಗ್ಗ ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರಾ.ಹ. ತಿಮ್ಮೇನಹಳ್ಳಿ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಯಾವುದೇ ನೆರವಿಲ್ಲದೆ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಕರಂತೆ ಶಿಕ್ಷಣದ ಜೊತೆ ಚುನಾವಣೆ,
ಮೌಲ್ಯಮಾಪನ, ಕ್ರೀಡಾಕೂಟ, ಸರ್ಕಾರಿ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸುತ್ತಿರುವ ಅನುದಾನ ರಹಿತ ಶಿಕ್ಷಕರಿಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೊಡಬೇಕೆಂಬ
ಭೋಜೇಗೌಡರು ನಿಲುವಿಗೆ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಅಧಿಕಾರಿಗಳೊಂದಿಗೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಕಾರಾತ್ಮಕ ಮನವಿಯನ್ನು ಅಂಗೀಕರಿಸುವ ಬಗ್ಗೆ ಚಿಂತಿಸಲಾಗುತ್ತದೆ ಎಂದರು.
ಅನುದಾನ ರಹಿತ ಶಿಕ್ಷಕರ ಬಗ್ಗೆ ಕಳಕಳಿ ತೋರಿದ ಶಾಸಕ ಭೋಜೇಗೌಡ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗ ಅನುದಾನ ರಹಿತ ಶಾಲಾ ಶಿಕ್ಷಕರು ಅಭಿನಂದಿಸಿದ್ದು ಕೂಡಲೇ ಯೋಜನೆಯನ್ನು ದಯಪಾಲಿಸಬೇಕೆಂದು ವಿನಂತಿಸಿದ್ದಾರೆ.