ಶಿವಮೊಗ್ಗ, ಜುಲೈ 23, : ಜಿಲ್ಲೆಯ ಸಾಗರ ಮತ್ತು ಸೊರಬ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


    ಈ ಹುದ್ದೆಗೆ ಆಯ್ಕೆ ಬಯಸುವವರು 07(ಏಳು) ವರ್ಷಗಳ ಕಾಲ

ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಅರ್ಹ ನ್ಯಾಯವಾದಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ

ಅರ್ಜಿ ಸಿದ್ದಪಡಿಸಿ ದಿನಾಂಕ: 02-08-2024 ರ ಸಂಜೆ 5

ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನ್ಯಾಯಾಂಗ ಶಾಖೆ, ಡಿಸಿ ಕಚೇರಿ, ದೂ.ಸಂ: 08182-221100, 221010, 9110642146 ನ್ನು ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!