ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ, ಟೆಕ್‌ಫಾರ್ಜ್ ಸ್ಟುಡೆಂಟ್ಸ್ ಕ್ಲಬ್, ಐಇಇಇ ಸ್ಟೂಡೆಂಟ್ ವಿಭಾಗದ ಸಂಯುಕ್ತಾಶ್ರಯದಲ್ಲಿ ಜು.27,28 ರಂದು ಎರಡು ದಿನಗಳ ಕಾಲ ರಾಷ್ಟ್ರ ಮಟ್ಟದ ʼಫಾಸ್ ಹ್ಯಾಕ್ – 2024ʼ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮುಂಬೈನ ಫಾಸ್ ಯುನೈಟೆಡ್ ಫೌಡೆಂಷನ್ ನೇತೃತ್ವದ ಈ ಹ್ಯಾಕಥಾನ್ ಕಾರ್ಯಕ್ರಮವು ರಾಷ್ಟ್ರದ ಮುಂಬೈ, ದೆಹಲಿ, ಪುಣೆ, ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಹಾಗೂ ಆನ್ಲೈನ್ ಮೂಲಕ
ಎರಡು ಹಗಲು ಒಂದು ರಾತ್ರಿ ಅವಧಿಯಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಅದರಲ್ಲಿ ಶಿವಮೊಗ್ಗದ ಜೆಎನ್‌ಎನ್ ಕಾಲೇಜು ಒಂದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ತಂಡ ತಮ್ಮ ನಾವೀನ್ಯ ಯೋಚನೆಗಳನ್ನು ಫಾಸ್ ಸಾಫ್ಟವೇರ್‌ನಲ್ಲಿ ಕೋಡಿಂಗ್ ಮೂಲಕ ರೂಪಿಸಬೇಕಾಗಿದ್ದು, ವಿಜೇತ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುತ್ತದೆ.
ಜೆಎನ್‌ಎನ್ ಕಾಲೇಜಿನಲ್ಲಿ ಜು.27 ರಂದು ಬೆಳಗ್ಗೆ 10:00 ಗಂಟೆಗೆ ಎಂಬಿಎ-ಎಂಸಿಎ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಯಮಿ ನಿವೇದನ್ ನೆಂಪೆ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕ ಟಿ.ಆರ್ ಅಶ್ವಥನಾರಾಯಣ ಶ್ರೇಷ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ವಿದ್ಯಾರ್ಥಿ ಸಂಯೋಜಕ ಕಂಪ್ಯೂಟರ್ ಸೈನ್ಸ್
ಎಂಜಿನಿಯರಿಂಗ್ ವಿದ್ಯಾರ್ಥಿ ಶಶಾಂಕ್.ಆರ್.ಆರ್ ಉಪಸ್ಥಿತರಿರಲಿದ್ದಾರೆ. ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರದ ಯೋಜನಾ ವ್ಯವಸ್ಥಾಪಕ ಅರುಣ್ ಕುಮಾರ್.ಕೆ.ಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.