ಶಿವಮೊಗ್ಗದ ಹುಣಸೋಡಿನಲ್ಲಿ ನಡೆಯುತ್ತಿರು ಕ್ರಶರ್ ಗಳಿಗೆ ಸರ್ಕಾರದ ಅನುಮತಿ ಇದ್ದು, ಕ್ವಾರೆ ನಡೆಸಲು ಯಾವುದೇ ಅನುಮತಿ ನೀಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುವ ಮೂಲಕ ಅಕ್ರಮ ಕೋರೆಗಳು ಇರುವುದನ್ನು ಒಪ್ಪಿಕೊಂಡರು.

ಅವರು ಇಂದು ಮದ್ಯಾಹ್ನ ಹುಣಸೋಡಿನ ಘಟನಾ ಸ್ಥಳಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸ್ಫೋಟದಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದು, ಈಗಾಗಲೇ ಪ್ರಾಥಮಿಕ ತನಿಖೆ ನಡೆದಿದೆ ಎಂದು ಹೇಳಿದರು..

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು ಇನ್ನೂ ಪ್ರಗತಿಯಲ್ಲಿದೆ ಎಂದು ಹೇಳಿದರು.

ಈಗಾಗಲೇ ಘಟನೆಯಲ್ಲಿ ಸಾವು ಕಂಡಿರುವ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಈ ಘಟನೆಗೆ ಸಂಬಂಧಿಸಿದಂತೆ ಯಾರೇ ಆರೋಪಿಗಳಾಗಿದ್ದರೂ ಸಹ ಅವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!