ಶಿವಮೊಗ್ಗ,ಆ.26: ಇತ್ತೀಚಿಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಬಿಜೆಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಸುರಕ್ಷತೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ಇಡೀ ನಾಗರೀಕ ಸಮಾಜ ತಲೆತಗ್ಗಿಸುವಂತಹ ಘಟನೆಗಳು ನಡೆಯುತ್ತಿವೆ. ಸರಣಿ ಕೊಲೆಗಳು ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನೇಹಾಘಟನೆ, ಮಡಿಕೇರಿಯಲ್ಲಿ ಮೀನಾಳ ಹತ್ಯೆ, ಅಂಜಲಿ ಕೊಲೆ, ಕಾರ್ಕಕಳದ ಬಳಿ ಸಾಮೂಹಿಕ ಅತ್ಯಾಚಾರ, 5 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿರುವುದು  ಹೀನಾಯ ಕೃತ್ಯವಾಗಿದೆ. ಸರ್ಕಾರ ಇದನ್ನು ತಡೆಯುವಲ್ಲಿ ವಿಫಲವಾಗುತ್ತಿದೆ. ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ನಗರಾಧ್ಯಕ್ಷೆ ರಶ್ಮಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಯಶೋದಾ, ನಿರ್ಮಲಾ, ಗೌರಿಶ್ರೀನಾಥ್, ಚೈತ್ರ, ರುದ್ರಾಂಭೆ, ರೂಪ, ದೀಪಾ, ಗೀತಾ, ಮೀನಾಕ್ಷಮ್ಮ, ಸುಶೀಲಕ್ಕ, ರತ್ನಮ್ಮ ಸೇರಿದಂತೆ ಮೊದಲಾದವರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!