ಶಿವಮೊಗ್ಗ,ಆ.೨೭:ಸಾಂಸ್ಕೃತಿಕ ಕಾರ್ಯಕ್ರಮದ ಪ್ರತಿಭೆಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಎನ್.ರಮೇಶ್ ಹೇಳಿದರು.


ಅವರು ಇಂದು ಪ್ರಿಯದರ್ಶಿನಿ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ಕಾಶಿಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು, ಕ್ರೀಡೆಯಂತೆ ಸಾಂಸ್ಕೃತಿಕ

ಕಾರ್ಯಕ್ರಮಗಳಿಗು ಇಂದು ಪ್ರೋತ್ಸಾಹದ ಅವಶ್ಯಕತೆ ಇದೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮೀಸಲಾತಿ ನೀಡಬೇಕು ಎಂದರು.


ಪೋಷಕರು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಪೋಷಿಸಬೇಕು. ಕೇವಲ ಶಿಕ್ಷಕರು ಮಾತ್ರವಲ್ಲ, ಅವರು ಕೂಡ ಪ್ರೋತ್ಸಾಹಿಸಿದರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ. ಮತ್ತು ಸಂಸ್ಕಾರ ಕಲಿಯಲು ನೆರವು ನೀಡಿದಂತ್ತೆಯಾಗುತ್ತದೆ ಎಂದರು.


ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ಹಾಕಲು ಸಹಾಯಕವಾಗುತ್ತದೆ. ಇದು ಸೃಜನಶೀಲತೆಯನ್ನು ನೀಡುತ್ತದೆ. ಉತ್ತಮ ಪ್ರಜೆಗಳಾಗಲು ಅನುಕೂಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಸುನೀತಾ ದೇವಿ, ಕಲ್ಲೇಶ್ ಮತ್ತಿತರರು ಭಾಗವಹಿಸಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!