ಶಿವಮೊಗ್ಗ: ಇಂದು ಬೆಳಗಿನ ಜಾವ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ನೇತೃತ್ವದಲ್ಲಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ. ಕಾರ್ಯಪ್ಪ, ಡಿವೈಎಸ್ಪಿಗಳಾದ ಕೃಷ್ಣಮೂರ್ತಿ, ಮಂಜುನಾಥ್, ಪೊಲೀಸ್ ನಿರೀಕ್ಷಕರಾದ ರವಿ ಪಾಟೀಲ್, ದೀಪಕ್, ಸತ್ಯನಾರಾಯಣ್, ಪ್ರಶಾಂತ್ ಹಾಗೂ ಇಬ್ಬರು ಪಿಎಸೈ ಮತ್ತು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಕರಣ ಒಂದರಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎನ್ನಲಾಗಿದ್ದು,
ಇದರ ಬೆನ್ನಲ್ಲೇ ಶಿವಮೊಗ್ಗ ಪೊಲೀಸ್ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ.
ಪೊಲೀಸರು ಜೈಲಿನ ಪ್ರತಿ ಬ್ಯಾರಕ್ಗಳನ್ನ ತಪಾಸಣೆ ನಡೆಸಿದ್ದಾರೆ. ಅಲ್ಲದೆ ನಿಷೇಧಿತ ವಸ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯಾವುದೇ ನಿಷೇದಿತ ವಸ್ತುಗಳು ತೊಡಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ರೇಣುಕಾಸ್ವಾಮಿಕೊಲೆ ಆರೋಪಿಗಳಿಬ್ಬರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ ಆಗುವ ಮುನ್ನವೇ ನಡೆದಿರುವ ಈ ದಾಳಿ ಮಹತ್ವದ ಪಡೆದುಕೊಂಡಿದೆ.