ಅಮೇರಿಕಾ,ಸೆ.02:
ಯುಎಸ್ಎ ದ ವರ್ಜೀನಿಯಾದ ರಿಚ್ಮಂಡ್ ನಗರದಲ್ಲಿರುವ ಪ್ರಖ್ಯಾತ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ 12ನೇ “ಅಕ್ಕ” ವಿಶ್ವ ಕನ್ನಡ ಸಮ್ಮೇಳನವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ, ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಉದ್ಘಾಟಿಸಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಮೈಸೂರು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ
ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರು, ಶ್ರೀಶೈಲನಾಥ ಸ್ವಾಮೀಜಿಯವರು, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು, ಸಚಿವ ಚೆಲುವರಾಯ
ಸ್ವಾಮಿ ಅವರು, ಮಾಜಿ ಸಚಿವರು ಹಾಲಿ ಶಾಸಕ ಎಸ್ ಟಿ ಸೋಮಶೇಖರ್ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಶಿ, ಗಣ್ಯರು ಮತ್ತು ಅಕ್ಕ ಸಮ್ಮೇಳನದ ಅಧ್ಯಕ್ಷ ಡಾ. ಅಮರನಾಥ ಗೌಡ, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಜಕರು ಉಪಸ್ಥಿತರಿದ್ದರು.