ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ವಿವರಣೆ
ಶಿವಮೊಗ್ಗ,ಜ.೨೬:
 ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ ೧೦೯ ನೇ ಪುಣ್ಯಸ್ಮರಣೋತ್ಸವ ಹಾಗೂ ಶರಣ ಸಾಹಿತ್ಯ ಮತ್ತು ಭಾವೈಕ್ಯ ಸಮ್ಮೇಳನ ಜನವರಿ ೨೮ ರಂದು ಸಂಜೆ ೫.೩೦ ಕ್ಕೆ ಬೆಕ್ಕಿನ ಕಲ್ಮಠದ ಗುರುಬಸವ ಭವನದಲ್ಲಿ ನಡೆಯಲಿದೆ ಎಂದು ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಭಾವೈಕ್ಯ ಸಮ್ಮೇಳನ, ಶರಣ ಸಾಹಿತ್ಯ, ಮಾಸಿಕ ಶಿವಾನುಭವ ಗೋಷ್ಠಿ, ವಿವಿಧ ಸ್ಪರ್ಧೆಗಳು ನಡೆಯಲಿವೆ. ಇದೊಂದು ಅಪರೂಪದ ಕಾರ್ಯಕ್ರಮವಾಗಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ಬೆಳಗ್ಗೆ ೧೦.೩೦ ಕ್ಕೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಬೆಕ್ಕಿನಕಲ್ಮಠ ಶ್ರೀಗಳಾದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದು, ಗುತ್ತಲ ಕಲ್ಮಠದ ಪ್ರಭು ಮಹಾಸ್ವಾಮಿ, ಕವಲೇದುರ್ಗದ ಡಾ. ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ, ಮೂಲೆಗದ್ದೆಯ ಅಭಿನವ ಚನ್ನಬಸವ ಮಹಾಸ್ವಾಮಿ, ಚೌಕಿಮಠದ ನೀಲಕಂಠ ಮಹಾಸ್ವಾಮಿಗಳ ಸಾನಿಧ್ಯ ವಹಿಸಲಿದ್ದಾರೆ. ಜಿಪಂ ಸಿಇಒ ಎಂ.ಎಲ್. ವೈಶಾಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎನ್.ಜೆ. ರಾಜಶೇಖರ್ ಉಪಸ್ಥಿತರಿರುವರು ಎಂದರು.
ಸಂಜೆ ೫.೩೦ ಕ್ಕೆ ಶರಣ ಸಾಹಿತ್ಯ, ಭಾವೈಕ್ಯ ಸಮ್ಮೇಳನ ಹಾಗೂ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ  ವಿಜಯಪುರದ ಅಭಿನವ ಸಿದ್ಧಾರೂಢ ಮಹಾಸ್ವಾಮಿ ಸಮ್ಮುಖದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶ್ರೀಮಠದ ವೆಬ್ ಸೈಟ್ ಹಾಗೂ ದಿನದರ್ಶಿಕೆ ಬಿಡುಗಡೆ ಮಾಡುವರು. ಹಾಗೂ ಕುವೆಂಪು ವಿವಿ ಉಪಕುಲಪತಿ ಡಾ. ಬಿ.ಪಿ. ವೀರಭದ್ರಪ್ಪ ಅವರು ಡಾ.ಹೆಚ್.ಎಂ. ನಾಗಾರ್ಜುನ ಅವರ ಸಂಪಾದನೆಯ ವಚನಕಾರರ ಲೋಕದೃಷ್ಠಿ ಪುಸ್ತಕವನ್ನು ಬಿಡುಗಡೆಗೊಳಿಸುವರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಂಗಭೂಮಿ ಕಲಾವಿದೆ ಬಿ. ಜಯಶ್ರೀ,  ಅವರಿಗೆ ಅಲ್ಲಮಪ್ರಭು ಪ್ರಶಸ್ತಿ, ಡಾ. ಮೋಹನ್ ಆಳ್ವ ಅವರಿಗೆ ಗುರು ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜ್, ತ್ಯಾಜವಳ್ಳಿ ಕಾವ್ಯ ಆರ್. ರವಿ ಅವರನ್ನು ಸನ್ಮಾನಿಸಲಾಗುವುದು. ಹಾಗೆಯೇ ಉದ್ಯಮಿ ಮುಜೀಬ್ ಸಾಹೇಬ್, ಅಡಕೆ ಮಂಡಿ ವರ್ತಕ ಬಿ. ಓಂಕಾರಮೂರ್ತಿ ಭತ್ತದ ವ್ಯಾಪಾರಿ ಪುಷ್ಪಾ ಮತ್ತು ಜಿ.ಬಿ. ಕುಬೇರಪ್ಪ ಅವರನ್ನು ಅಭಿನಂದಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸ್ಮರಣೋತ್ಸವ ಸಮಿತಿ ಅಧ್ಯಕ್ಷೆ ಎಸ್.ವೈ. ಅರುಣಾದೇವಿ, ಕಾರ್ಯಾಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ, ಪ್ರಧಾನ ಕಾರ್ಯದರ್ಶಿ ಶಾಂತಾ ಆನಂದ್, ರತ್ನಾ ಮಂಜುನಾಥ್, ಶಕುಂತಲಾ ಟಿ.ಬಿ. ಜಗದೀಶ್, ಕಿರಣ್ ದೇಸಾಯಿ, ಎನ್.ಜೆ. ರಾಜಶೇಖರ್, ಶಾಂತವೀರಪ್ಪ, ಹೆಚ್.ವಿ. ಮಹೇಶ್ವರಪ್ಪ ಇನ್ನಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!