ಹೊಸನಗರ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕುಎಂದುಮಾಜಿ ಗೃಹ ಸಚಿವ ಆರಗಜ್ಞಾನೇಂದ್ರ ಆಗ್ರಹಿಸಿದರು.


ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.


ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ

. ತಮ್ಮ ೫ ದಶಕಗಳ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಇಲ್ಲ ಎಂದು ಹೇಳುತ್ತಿದ್ದರು. ಈಗ ತನಿಖೆಎದುರಿಸುವುದು ಅನಿವಾರ್ಯವಾಗಿದೆ

. ತನಿಖೆ ನಡೆಸುವುದನ್ನೇ ತಡೆಯಲು ಹೊರಟಿದ್ದ ಸಿದ್ದರಾಮಯ್ಯ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ತಮ್ಮ ವರಸೆ ಬದಲಿಸಿದ್ದು, ಯಾವುದೇ ತನಿಖೆಗೆ ಸಿದ್ದ ಎಂದಿದ್ದಾರೆ. ಆದರೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ತನಿಖೆ ಎದುರಿಸುವುದು ಸರಿಯಲ್ಲ ಎಂದರು.


ಪ್ರಕರಣದಲ್ಲಿಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿರುವುದುದುರದೃಷ್ಠಕರ. ಒಂದುರಾಷ್ಟ್ರೀಯ ಪಕ್ಷವಾಗಿದ್ದು, ಭ್ರಷ್ಠಾಚಾರಆರೋಪ ಕೇಳಿಬಂದಾಗಲೂ ಆಪಾದನೆಗೆ ಒಳಗಾದವರ ಬೆಂಬಲಕ್ಕೆ ನಿಂತಿರುವುದು ಪಕ್ಷದ ನಿಲುವನ್ನುತೋರಿಸುತ್ತಿದೆ.

ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿ, ತನಿಖೆ ಎದುರಿಸಲಿ. ತನಿಖೆ ಬಳಿಕ ಅವರು ’ಶುದ್ಧರಾಮಯ್ಯ’ ಎಂದು ಸಾಬೀತಾದಲ್ಲಿ ಮತ್ತೆ ಮುಖ್ಯಮಂತ್ರಿಯಾದಲ್ಲಿ ತಮಗೇನೂ ಅಭ್ಯಂತರವಿಲ್ಲ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!