ಶಿವಮೊಗ್ಗ, ಸೆಪ್ಟಂಬರ್ 27: ಅರಣ್ಯ ಇಲಾಖೆಯು ಭದ್ರಾ ಹುಲಿ ಸಂರಕ್ಷಿತ ಪ್ರದೇಶ, ಚಿಕ್ಕಮಗಳೂರು ಇದರ ರಜತ ಮಹೋತ್ಸವ ಕಾರ್ಯಕ್ರಮ-2024 ನ್ನು ಅ.04 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗ ಜಿಲ್ಲೆಯ
ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ಬಸವ ಸಧನದಲ್ಲಿ ಆಯೋಜಿಸಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಜೀವಿಶಾಸ್ತç ಹಾಗೂ ಪರಿಸರ ಸಚಿವ ಈಶ್ವರ ಬಿ. ಖಂಡ್ರೆರವರು ನೆರವೇರಿಸಲಿದ್ದಾರೆ.
ಕ.ರಾ.ಗ್ರಾ.ಮೂ.ಸೌ.ಅ. ನಿಗಮದ ಅಧ್ಯಕ್ಷ ಭದ್ರಾವತಿ ಕ್ಷೇತ್ರದ ಶಾಸಕರಾದ ಬಿ.ಕೆ.ಸಂಗಮೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮತ್ತು ಇಂಧನ ಇಲಾಖೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಚ್ ಇವರುಗಳ ಗೌರವ ಉಪಸ್ಥಿತಿ ಇರಲಿದೆ.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕ.ರಾ.ಅ.ಕೈ.ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಕ.ನ.ಇಂ.ಅ.ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ,
ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ|| ಆರತಿ ಕೃಷ್ಣ ಮತ್ತು ಕ.ರಾ.ಪ್ರ.ಅ.ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ ಇವರುಗಳು ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸಂಸದರು ಹಾಗೂ ಶಾಸಕರು, ವಿವಿಧ ನಿಗಮ/ಮಂಡಳಿಯ ಅಧ್ಯಕ್ಷರುಗಳು, ಅರಣ್ಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು,
ಅರಣ್ಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.