ಸಾಗರ : ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಗಜಾನನ ಹಿರೇಮಠ (೫೦) ಬುಧವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.


ಶಿಕ್ಷಕ ಗಜಾನನ ಹಿರೇಮಠ ಅವರು ಕ್ರಾಫ್ಟ್ ಜೊತೆಗೆ ಮಕ್ಕಳಿಗೆ ವಿವಿಧ ಕ್ರೀಡೆ ಕುರಿತು ತರಬೇತಿ ನೀಡುತ್ತಿದ್ದರು. ಬುಧವಾರ ಗಜಾನನ ಹಿರೇಮಠ ಅವರು ಶಾಲಾವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಮಾರ್ಗಮಧ್ಯದಲ್ಲಿ ಅವರು ಅಸುನೀಗಿದ್ದಾರೆ.


ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಈ., ಮಲೆನಾಡು ಅಭಿವೃದ್ದಿ ಪ್ರತಿಷ್ಟಾನದ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ ಭೇಟಿ ನೀಡಿದರು.

By admin

ನಿಮ್ಮದೊಂದು ಉತ್ತರ

error: Content is protected !!