ಶಿವಮೊಗ್ಗ, ಅಕ್ಟೋಬರ್ ೧೮ ) : ನವೆಂಬರ್ ೧ ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.
ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿ?ಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘಸಂಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರೀಕರಿಗೆ ಜಾರಿ ಮಾಡಲು ಸೂಚಿಸಿದರು.
ನ.೧ ರ ಬೆಳಿಗ್ಗೆ ೮ ಗಂಟೆಯಿಂದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಹೊರಡುವುದು. ಮೆರವಣಿಗೆಯಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಎನ್ಸಿಸಿ ಬ್ಯಾಂಡ್, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ತಲಾ ಎರಡು ಕಲಾ ತಂಡಗಳನ್ನು ಕಳುಹಿಸಿಕೊಂಡುವಂತೆ ತಿಳಿಸಿದರು.
ಭುವನೇಶ್ವರಿ ದೇವಿ ಪ್ರತಿಮೆ ಅಲಂಕಾರ ಮತ್ತು ವಾಹನ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು ಮಾಡಬೇಕು. ಧ್ವಜಾರೋಹಣಕ್ಕೆ ಅಗತ್ಯ ವ್ಯವಸ್ಥೆಗಳಾದ ಧ್ವಜ, ಧ್ವಜಸ್ತಂಭ, ವೇದಿಕೆ ಅಲಂಕಾರ ಇತ್ಯಾದಿ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಕೈಗೊಳ್ಳಬೇಕು. ಸ್ವಾಗತ ಕಮಾನು, ಹೂವಿನ ತೋರಣ, ಅತಿಥಿ ಸತ್ಕಾರ, ಪೂರ್ವ ಸಿದ್ದತೆಯನ್ನು ಸಾರಿಗೆ ಉಪ ಆಯುಕ್ತರು, ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾ ಯುವಜನ ಸಬಲೀಕರಣ ಇಲಾಖೆಯವರು ನಿರ್ವಹಿಸಬೇಕು.
ಕೃಷಿ ಇಲಾಖೆ, ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪ್ರವಾಸೋದ್ಯಮ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಕೆಎಸ್ಆರ್ಟಿಸಿ, ಆರೋಗ್ಯ ಇಲಾಖೆಯವರು ಟ್ಯಾಬ್ಲೋಗಳನ್ನು ತಯಾರಿಸಿ ಪ್ರದರ್ಶಿಸುವಂತೆ ಸೂಚಿಸಿದರು.
ಶಾಲಾ ಮಕ್ಕಳನ್ನು ಮೆರವಣಿಗೆಯಲ್ಲಿ ಕರೆತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ರೂಟ್ ಮ್ಯಾಪ್ ತಯಾರಿಸಿ ನಿರ್ವಹಿಸಬೇಕು. ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಮೈದಾನದಲ್ಲಿ ?ಮಿಯಾನ, ಉತ್ತಮ ಸೌಂಡ್ ಸಿಸ್ಟಂ ಇತರೆ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ಆಸನ ವ್ಯವಸ್ಥೆಯನ್ನು ತಹಶೀಲ್ದಾರರು, ಪಾಲಿಕೆಯವರು ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಾಲನೆ ಮತ್ತು ನಿರ್ವಹಣೆ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಿ ಹಂಚಿಕೆಯನ್ನು ಶಿಮುಲ್, ಪಾಲಿಕೆ, ಡಿಡಿಪಿಐ ನೋಡಿಕೊಳ್ಳುವಂತೆ ತಿಳಿಸಿದರು.
ಪ್ರಮುಖ ರಸ್ತೆಯ ವೃತ್ತಗಳಿಗೆ ವಿದ್ಯುತ್ ಅಲಂಕಾರವನ್ನು ಮೆಸ್ಕಾಂ, ಪಾಲಿಕೆ ಆಯುಕ್ತರು, ಸೂಡಾ ಆಯುಕ್ತರು ಹಾಗೂ ಧ್ವನಿ ವರ್ಧಕದ ಮೂಲಕ ಕನ್ನಡ ದೇಶಭಕ್ತಿ ಗೀತೆಗಳನ್ನು ಪ್ರಸಾರ ಮಾಡುವ ವವಸ್ಥೆಯನ್ನು ಅಬಕಾರಿ ಇಲಾಖೆ, ನೋಂದಣಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯವರು ನೋಡಿಕೊಳ್ಳಬೇಕೆಂದು ತಿಳಿಸಿದರು.
ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ, ಪಾಲಿಕೆ ಆಯುಕ್ತರು ನಿರ್ವಹಿಸಬೇಕು. ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನ ವ್ಯವಸ್ಥೆಯನ್ನು ಜಿಲ್ಲಾ ಸರ್ಜನ್ರು ಹಾಗೂ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ನಿರ್ವಹಿಸುವಂತೆ ಸೂಚಿಸಿದ ಅವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ವರ್ಗದವರು ಸಮಾರಂಭಕ್ಕೆ ಹಾಜರಾಗುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ
ಶಿವಮೊಗ್ಗ. ಅಕ್ಟೋಬರ್ ೧೮; ಶಿಕಾರಿಪುರ ತೋಟಗಾರಿಕೆ ಇಲಾಖೆಯು ೨೦೨೫-೨೬ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ (ಎಸ್ಸ್ಸಿ/ಎಸ್ಟಿ ಆಗಿದ್ದಲ್ಲಿ), ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ) ಗಳನ್ನು ಲಗತ್ತಿಸಿ ನ. ೦೫ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಬಿ ಮತ್ತು ಸಿ ಮುಜರಾಯಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, ಅಕ್ಟೋಬರ್ ೧೮ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ಬಿ ಮತ್ತು ಸಿ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ ೩ ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ನಿಗಧಿತ ನಮೂನೆ -೧(ಬಿ) (೨೨ನೇ ನಿಯಮ) ನ್ನು ಆಯಾ ತಾಲೂಕು ಕಚೇರಿಗಳಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ನ.೧೯ರೊಳಗಾಗಿ ಸಂಬಂಧಿಸಿದ ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸ ಬಯಸುವ ಆಸಕ್ತರಿಗೆ ಅರ್ಹತೆಯಗಳು: ಕನಿಷ್ಠ ೨೫ ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವ ಮಾತ್ರ ಪಡೆಯಬಹುದಾಗಿದೆ. ದೇವರಲ್ಲಿ ನಂಬಿಕೆಯುಳ್ಳವರಾಗಿದ್ದು, ಒಳ್ಳೆಯ ವರ್ತನೆ ಹಾಗೂ ಹೆಸರು ಹೊಂದಿದ್ದ ಹಾಗೂ ದೇವಾಲಯ/ಸಂಸ್ಥೆಯು ಇರುವ ಪ್ರದೇಶದಲ್ಲಿ ಗೌರವಕ್ಕೆ ಪಾತ್ರರಾಗಿರಬೇಕು.
ಅನರ್ಹತೆಗಳು: ಒಂದು ಸಕ್ಷಮ ನ್ಯಾಯಾಲಯದಿಂದ ಅವಿಮುಕ್ತ ದಿವಾಳಿಯೆಂದು ಘೋಷಿತನಾಗಿರಬಾರದು. ಅಸ್ವಸ್ಥಚಿತ್ತನಾಗಿದ್ದು ಮತ್ತು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲಾಗಿದ್ದರೆ ಅಥವಾ ಕಿವುಡು ಅಥವಾ ಮೂಕ ಅಥವಾ ಕುಷ್ಟ ಅಥವಾ ಇತರೆ ಯಾವುದೇ ಭಯಂಕರ ಅಥವಾ ಸಾಂಕ್ರಾಮಿಕ ಕಾಯಿಲೆಯಿಂದ ಪೀಡಿತನಾಗಿರಬಾರದು. ದೇವಾಲಯದ ಯಾವುದೇ ಸ್ವತ್ತಿನ ಅಥವಾ ಮಾಡಿಕೊಳ್ಳಲಾದ ಕರಾರಿನ ಸಂಬಂಧದಲ್ಲಿ ಈಗಿರುವ ಗುತ್ತಿಗೆ ಸಂಸ್ಥೆಗಾಗಿ ಮಾಡಲಾದ ಕಾಮಗಾರಿಯಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷ ಹಿತಾಸಕ್ತಿ ಹೊಂದಿದ್ದರೆ ಅಥವಾ ಸಂಸ್ಥೆಗಾಗಿ ತಾನು ಕೊಡಬೇಕಾದ ಯಾವುದೇ ಪ್ರಕಾರದ ಬಾಕಿಯನ್ನು ಕೊಡದೆ ಉಳಿಸಿಕೊಂಡಿದ್ದರೆ, ಸಂಸ್ಥೆಯ ಪರವಾಗಿ ಅಥವಾ ವಿರುದ್ಧವಾಗಿ ಕಾನೂನು ವೃತ್ತಿಗಾರನಾಗಿ ಹಾಜರಾಗುತ್ತಿದ್ದರೆ, ನೈತಿಕ ಅಧಃಪತನವನ್ನು ಒಳಗೊಳ್ಳುವ ಒಂದು ಅಪರಾಧಕ್ಕಾಗಿ ಕ್ರಿಮಿನಲ್ ನ್ಯಾಯಾಲಯದಿಂದ ಶಿಕ್ಷಿತನಾಗಿದ್ದು ಮತ್ತು ಅಂತಹ ಶಿಕ್ಷೆಯನ್ನು ಹಿಂತೆಗೆದುಕೊಂಡಿದ್ದರೆ ಅಥವಾ ಅಪರಾಧವನ್ನು ಕ್ಷಮಿಸಿರದಿದ್ದರೆ, ಯಾವಾಗಲಾದರೂ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದರೆ ಅಥವಾ ಅಂತಹ ಸಂಸ್ಥೆಯ ಅರ್ಚಕರಾಗಿ ಅಲ್ಲದೆ ಯಾವುದೇ ಪದವಿಯನ್ನು ಧಾರಣೆ ಮಾಡಿದ್ದರೆ ಅಥವಾ ಒಬ್ಬ ನೌಕರನಾಗಿದ್ದರೆ ಅಥವಾ ಅಂತಹ ಸಂಸ್ಥೆಯಿಂದ ಯಾವುದೇ ಉಪಲಬ್ಧಿಗಳನ್ನು ಅಥವಾ ಅನುವಂಶಿಕ ಲಾಭವನ್ನು ಸ್ವೀಕರಿಸುವ ವ್ಯಕ್ತಿಯಾಗಿದ್ದರೆ, ಮದ್ಯಪಾನ ಅಥವಾ ಮಾದಕದ್ರವ್ಯ ವ್ಯಸನಿಯಾಗಿದ್ದರೆ, ಹಿಂದೂ ಅಲ್ಲದಿದ್ದರೆ ಅಥವಾ ಆಗಿದ್ದು ತರುವಾಯದಲ್ಲಿ ಯಾವುದೇ ಇತರೆ ಧರ್ಮಕ್ಕೆ ಪರಿವರ್ತಿತನಾಗಿದ್ದರೆ, ಅವನು ಯಾವುದೇ ಅಧಿಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿ ಸದಸ್ಯನಾಗಿ ನೇಮಕಗೊಳ್ಳಲು ಅಥವಾ ಮುಂದುವರೆಯಲು ಅನರ್ಹನಾಗಿರುತ್ತಾನೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ದೇವಾಲಯಗಳ ಮಾಹಿತಿಗಾಗಿ ಆಯಾ ತಾಲೂಕು ತಹಶೀಲ್ದಾರರನ್ನು ಸಂಪರ್ಕಿಸುವುದು.
ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು/ಸಿಬ್ಬಂದಿಗಳಿಗೆ ವಿಶೇಷ ತರಬೇತಿ ಶಿಬಿರ
ಶಿವಮೊಗ್ಗ, ಅಕ್ಟೋಬರ್ ೧೮: : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಾಕರ ಸಂಘಗಳ ಒಕ್ಕೂಟ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಅ.೧೯ ರಂದು ಮಾಚೇನಹಳ್ಳಿಯ ಹಾಲು ಒಕ್ಕೂಟದ ಕುರಿಯನ್ ಸಭಾಂಗಣದಲ್ಲಿ ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಅವಧಿ ವಿಸ್ತರಣೆ
ಶಿವಮೊಗ್ಗ, ಅಕ್ಟೋಬರ್ ೧೮:: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೪-೨೫ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-೧ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ ತಿತಿತಿ.ssಠಿ.ಠಿosಣmಚಿಡಿಣiಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ ೩೦ ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in ದೂ.ಸಂ.: ೧೯೦೨, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: ೦೮೧೮೨-೨೨೨೧೨೯ ಅಥವಾ ಸಹಾಯವಾಣಿ ೮೦೫೦೭೭೦೦೦೫ ಗಳನ್ನು ಸಂಪರ್ಕಿಸುವುದು.
ಅನಾಮದೇಯ ವ್ಯಕ್ತಿಯ ಶವ ಪತ್ತೆ; ವಾರಸ್ಸುದಾರರ ಪತ್ತೆಗೆ ಮನವಿ
ಶಿವಮೊಗ್ಗ, ಅಕ್ಟೋಬರ್ ೧೮ಅ.೧೬ ರಂದು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟೆ ಆಂಜನೇಯ ದೇವಸ್ಥಾನದ ಎದುರುಗಡೆಯ ಮನೆಯ ಆವರಣದಲ್ಲಿ ಸುಮಾರು ೩೦ ರಿಂದ ೩೫ ವರ್ಷದ ಅನಾಮದೇಯ ವ್ಯಕ್ತಿಯು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದು, ಈತನ ಚಹರೆ ಸುಮಾರು ೦೫.೦೫ ಅಡಿ ಎತ್ತರ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ತಲೆಯಲ್ಲಿ ೨ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಕೂದಲು ಹಾಗೂ ೧ ಇಂಚು ಉದ್ದದ ಕುರುಚಲು ಗಡ್ಡ ಇರುತ್ತದೆ. ಮೃತನ ಮೈಮೇಲೆ ತಿಳಿ ನೀಲಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.