ಶಿವಮೊಗ್ಗ: ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷ ಎಂದು ಟೀಕಿಸಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ವಿರುದ್ದ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಬಿಜೆಪಿಯೇ ಭ್ರಷ್ಟಾಚಾರದ ಜನಕ ಎಂದು ಟೀಕಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಸಂಸದರು ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆಯೇ ಬಿಜೆಪಿಯಲ್ಲಿ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದ್ದು, ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪನವರು ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ ರಾಜೀನಾಮೆ ನೀಡಬೇಕಾಯಿತು. ಅವರು ಕಣ್ಣೀರ ಧಾರೆಗೆ ಕಾರಣ ಯಾರು? ಜಿಲ್ಲೆಯಲ್ಲಿನ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಯಾರಿಂದ ಎನ್ನುವ ಬಗ್ಗೆ ಬಹಿರಂಗ ಚರ್ಚೆ ಬನ್ನಿ ಎಂದು ಪಂಥಾಹ್ವಾನ ನೀಡಿದ ಅವರು, ಬಿಜೆಪಿ ರಾಘವೇಂದ್ರ, ವಿಜಯೇಂದ್ರ ಬಂದ ನಂತರ ಭ್ರಷ್ಟಾಚಾರ ಜನಕ ಪಕ್ಷವಾಗಿದೆ ಎಂದರು.
ಬಿ.ವೈ. ರಾಘವೇಂದ್ರ ಅವರೇ ನೀವು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾವಿರಾರು ಕೋಟಿ ರೂ.ಗಳ ಬೇನಾಮಿ ಆಸ್ತಿಗಳನ್ನು ಟ್ರಸ್ಟ್ಗಳ ಹೆಸರಿನಲ್ಲಿ ರಿಜಿಸ್ಟ್ರಾರ್ ಮಾಡಿಕೊಂಡಿದ್ದೀರಾ. ಹಣದ ಮೂಲವನ್ನು ತಾವು ಪ್ರಕಟ ಮಾಡಬಹುದಾ? ಭ್ರಷ್ಟಾಚಾರದ ಆರೋಪದ ಮೇಲೆ ಒಬ್ಬ ಹೋರಾಟಗಾರನ ಅಂತ್ಯ ಆಗಿದೆ. ನಮ್ಮ ಜಿಲ್ಲೆಯ ರಾಜಕಾರಣಕ್ಕೆ ಕಪ್ಪುಚುಕ್ಕೆ ತರುವಂತೆ ಯಡಿಯೂರಪ್ಪ ಅವರನ್ನು ಬಲಿತೆಗೆದಕೊಂಡಿದ್ದು ಬಿಜೆಪಿಯ ಭ್ರಷ್ಟಾಚಾರವೇ ಹೊರತು, ಬೇರಾವ ಜನಾಂದೋಲನಗಳಲ್ಲ. ತಮ್ಮ ಮತ್ತು ಕುಟುಂಬದ ಭ್ರ್ರಷ್ಟಾಚಾರದ ಕಾರಣದಿಂದ ಹೈಕಮಾಂಡ್ ಅನಿವಾರ್ಯವಾಗಿ ಅಧಿಕಾರಿಂದ ಕೆಳಗಿಳಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ದ ಮಾತು ಬಂದಿರುವುದನ್ನು ಸ್ವಾಗತಿಸುತ್ತೇನೆ ಎಂದು ಲೇವಡಿ ಮಾಡಿದರು.
ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ:
ಕಾಂಗ್ರೇಸ್ ಪಕ್ಷನ್ನು ಕರೆಪ್ಸನ್ ಪಾರ್ಟಿ ಎಂದು ಕರೆಯುವ ಸಂಸದರೆ ನಿಮ್ಮ ಪಕ್ಷದ ಸ್ಥಿತಿಯನು? ಬಿಜೆಪಿ ಭಾರತೀಯ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ ಆಗಿದೆ. ನಿಮ್ಮದೆ ಪಕ್ಷ ನಾಯಕರ ಮೇಲೆ ಪೆÇೀಕ್ಸೋ ಕೇಸುಗಳಿವೆ. ನಿಮ್ಮ ಪಕ್ಷ ಮೂರು ಮಾಜಿ ಸಿಎಂ ಗಳಾದ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಸಚಿವರ ಮಕ್ಕಳು, ನಿಮ್ಮ ಎನ್ ಡಿಎ ಪಾಲುದಾರರಾದ ಹೆಚ್ ಡಿ ಕುಮಾರಸ್ವಾಮಿ ಅವರೆಲ್ಲಾ ಯಾಕೆ ಕೋರ್ಟು ನಿಂದ ಸ್ಟೇ ತಂದಿದ್ದಾರೆ. ಅಂತಹದ್ದೇನಿತ್ತು? ಹೇಳುವಿರಾ? ಕೇವಲ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿಲ್ಲ, ಪುರುಷರ ಮೇಲೂ ನಡೆದಿದೆ. ನಿಮ್ಮ ಸರ್ಕಾರದಲ್ಲಿ ಸಚಿವನಾಗಿದ್ದ ಮುನಿರತ್ನನ ವಿರುದ್ದ ಬಿಜೆಪಿಯ ಯಾವ ನಾಯಕನೂ ಮಾತನಾಡುವುದಿಲ್ಲ. ಅವನು ಅತ್ಯಾಚಾರ ಮಾಡ್ತಾನೆ, ಏಡ್ಸ್ ಹಂಚುತ್ತಾನೆ. ಅವನ ಬಗ್ಗೆ ಯಾಕೆ ನೀವು ಮಾತನಾಡುತ್ತಿಲ್ಲ, ನಿಮಗೇನಾದರೂ ಭಯವಿದೆಯಾ ಎಂದರು.
ಭಾರತೀಯ ಸಂಸ್ಕøತಿ ರಕ್ಷಣೆ ಮಾತನಾಡುತ್ತಲೆ ಅದೇ ಸಂಸ್ಕೃತಿಯ ಮೇಲೆ ಅತ್ಯಾಚಾರ ಎಸಗಲಾಗುತ್ತಿದೆ. ಅಲ್ಲದೆ ಭ್ರಷ್ಟಾಚಾರದ ಮೂಸೆಯಲ್ಲಿ ಮೂಡಿ ಬಂದ ನೀವು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡಬಾರದು. ಕೊರೋನಾ ಕಾಲದಲ್ಲಿ ಜನರ ಜೀವದ ಜೊತೆ ಚೆಲ್ಲಾಟವಾಡಿ ಸಾವಿರಾರು ಕೋಟಿ ರೂ.ಗಳ ಲೂಟಿ ಹೊಡೆದಿರುವ ನೀವು ಇನ್ನಾದರೂ ಭ್ರಷ್ಟಾಚಾರದ ಬಗ್ಗೆ ಮಾತಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.
ಮಹಾಸಭಾ ಸಭೆ ಗೊಂದಲ:
ಜಾತಿಗಣತಿ ಕುರಿತಂತೆ ಆಖಿಲಭಾರತ ವೀರಶೈವ -ಲಿಂಗಾಯಿತ ಮಹಾಸಭಾ ಕರೆದಿರುವ ಸಭೆ ಗೊಂದಲದಿಂದ ಕೂಡಿದೆ ಎಂದು ಆಯನೂರು ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ಮಹಾಸಭಾದ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ನ ಮುಖಂಡರಾಗಿಯೂ ಇದ್ದಾರೆ. ಅವರು ಒಂದು ಸ್ಪಷ್ಟ ನಿಲುವು ಹೊಂದಬೇಕು. ಜಾತಿಗಣತಿ ಆಗಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದಕ್ಕೆ ಎಲ್ಲರೂ ಬದ್ದರಾಗಿರಬೇಕು. ಜಾತಿಗಣತಿ ಬಗ್ಗೆ ವೀರಶೈವ-ಲಿಂಗಾಯಿತ ಮಹಾಸಭೆ ಕರೆದಿರುವ ಸಭೆಯ ಹಿಂದೆ ಬಿಜೆಪಿಯ ಕೈವಾಡವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಇದಾಗಿದೆ ಎಂದರು.
ವೀರಶೈವ-ಲಿಂಗಾಯಿತ ಮಹಾಸಭಾ ನಾವು ಹಿಂದೂಗಳಲ್ಲ. ನಮ್ಮದು ಲಿಂಗಾಯಿತ ಧರ್ಮ ಎಂದು ಈಗಾಗಲೆ ನಿರ್ಧಾರ ತೆಗೆದುಕೊಂಡಿದೆ. ನಾಳೆ ನಡೆಯಲಿರುವ ವೀರಶೈವ-ಲಿಂಗಾಯಿತ ಮಹಾಸಭಾದ ಸಭೆಗೆ ಹೋಗುವ ಮುನ್ನ ಯಡಿಯೂರಪ್ಪ ಮತ್ತವರ ಮಕ್ಕಳು ಜಾತಿ ಗಣತಿ ಸಂದರ್ಭದಲ್ಲಿ ಧರ್ಮದ ಕಾಲಂ ನಲ್ಲಿ ವೀರಶೈವ ಲಿಂಗಾಯಿತ ಅಂತರೆ ಬರೆಸುತ್ತಿರೋ? ಅಥವಾ ಬಿಜೆಪಿಯ ಹಿಂದೂ ಎಂದು ಬರೆಸುತ್ತಿರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಯ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾ ಬಂದಿರುವ ಯಡಿಯೂರಪ್ಪ ಕುಟುಂಬ ಎರಡು ದೋಣಿಯ ಮೇಲೆ ಕಾಲಿಟ್ಟು ಸಾಗುತ್ತಿದೆ. ಅವರು ಇದಕ್ಕೆ ಉತ್ತರ ಕೊಡಬೇಕು ಎಂದು ಆಯನೂರು ಮಂಜುನಾಥ್ ಆಗ್ರಹಿಸಿದರು.
ಜಾತಿಗಣತಿ ಇಂದಲ್ಲಾ ನಾಳೆ ಆಗಲೇಬೇಕು. ಇಲ್ಲದಿದ್ದರೆ ಸಾಮಾಜಿಕ ನ್ಯಾಯ. ಆರ್ಥಿಕ ನೀತಿಗಳನ್ನು ಸರಿಪಡಿಸಲು ಆಗುವುದಿಲ್ಲ. ಜಾತಿ ಗಣತಿ ನಡೆಯುವುದು ಸರಿಯಾಗಿದೆ ಎಂದು ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೇಳೂರು ಗೋಪಾಲಕೃಷ್ಣ, ಶಂಕರಘಟ್ಟ ರಮೇಶ್, ಶಿ.ಜು. ಪಾಶಾ, ಜಿ. ಪದ್ಮನಾಭ್, ಸೋಮಶೇಖರ್, ಬಾಲಾಜಿ ಇದ್ದರು.