ಶಿವಮೊಗ್ಗ, ಜ.30:
“ನಮ್ಮ ನಡಿಗೆ-ತ್ಯಾಜ್ಯ ಮುಕ್ತದ ಕಡೆಗೆ” ಆಂದೋಲನದ ಅಂಗವಾಗಿ ಇಂದು ಶಿವಮೊಗ್ಗ ತಾಲ್ಲೂಕು ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ಇಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಅವರು ಸ್ಪಚ್ಚತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಕಾಯಕೋತ್ಸವ ಅಂಗವಾಗಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸ್ಥಳಕ್ಕೆ ಅವರು ಭೇಟಿ ನೀಡಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಯಾವ ರೀತಿ ಉಪಯೋಗವಾಗುತ್ತದೆ ಎಂದು ಸ್ಥಳದಲ್ಲಿದ್ದ ಮಹಿಳೆಯರು ಜೊತೆ ಚರ್ಚಿಸಿದರು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಕೆಲಸಕ್ಕೆ ಮಹಿಳೆಯರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಶ್ಲಾಘಿಸಿ ಅರಿಶಿನ ಕುಂಕುಮ ಹಾಗೂ ಗುಲಾಬಿ ಹೂವನ್ನು ನೀಡುವ ಮೂಲಕ ಮಹಿಳಾ ಕಾಯಕೋತ್ಸವದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.