ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನವೆಂಬರ್ 08
ಶಿವಮೊಗ್ಗ ತಾಲ್ಲೂಕು ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗದಿಂದ ಸರಬರಾಜಾಗುವ ಎಫ್-7, ಎಫ್-8 ಮತ್ತು ಎಫ್-10 ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ. ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ನ. 12, 13, 14 ಮತ್ತು 15 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
==
ವಾಯು ಮಾಲಿನ್ಯ ನಿಯಂತ್ರಣ ಅರಿವು ಕಾರ್ಯಕ್ರಮ
ಶಿವಮೊಗ್ಗ ನ.08
ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಶಿವಮೊಗ್ಗದ ವತಿಯಿಂದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ 2024 ರ ಪ್ರಯುಕ್ತ ಶುಕ್ರವಾರ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ವಾಯು ಮಾಲಿನ್ಯ ನಿಯಂತ್ರಣ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮೋಟಾರು ವಾಹನ ನಿರೀಕ್ಷಕ ಪಿ. ಎಂ. ಮಲ್ಲೇಶಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ, ಅಧೀಕ್ಷಕರಾದ ರಾಮಚಂದ್ರಪ್ಪ, ಮೋಹನ್ ಕುಮಾರ್, ಸಿಬ್ಬಂದಿ ವರ್ಗದವರು, ಕಾಲೇಜಿನ ಪ್ರಾಂಶುಪಾಲ ಸುಖೇಶ್ ದೇವಾಡಿಗ, ಕಾಲೇಜಿನ ಬಸ್ ಚಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
==
ನ.14 ರಂದು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಶಿವಮೊಗ್ಗ ನವೆಂಬರ್ 08() ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆ ಅಡಿ 2024-25 ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿವಮೊಗ್ಗ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನ.14 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಿಳಘಟ್ಟ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಪೂರ್ಣದೃಷ್ಟಿ ದೋಷ, ಶ್ರವಣ ದೋಷ, ಲೋಕೋಮೋಟರ್ (ದೈಹಿಕ ಅಂಗವಿಕಲತೆ), ಸೆರೆಬ್ರಲ್ ಪಾಲ್ಸಿ, ಬಹು ಅಂಗಾAಗ ವಿಕಲತೆ, ದೈಹಿಕ ಅಂಗವಿಕಲತೆವುಳ್ಳ ಮಕ್ಕಳು ಭಾಗವಹಿಸಬಹುದು.
ಶಿಬಿರಕ್ಕೆ ಹಾಜರಾಗಲು ಅಂಗವಿಕಲ ಗುರುತಿನ ಚೀಟಿ, ಆದಾಯ ಪ್ರಮಾಣ ಪತ್ರ, ಮಗುವಿನ ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಮಗುವಿನ ಪಾಸ್‌ಪೋರ್ಟ್ ಸೈಜಿನ 4 ಭಾವಚಿತ್ರಗಳು ಮಗುವಿನ ಬ್ಯಾಂಕ್ ಪಾಸ್ ಪುಸ್ತಕ, ಮಗುವಿನ ಆಧಾರ್ ಕಾರ್ಡ್ನ್ನು ತರಬೇಕು .
ಈ ಶಿಬಿರದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಾಲೆಗಳ ವಿಕಲಚೇತನ ಮಕ್ಕಳು(ಈ ಹಿಂದೆ ಸಾಧನ ಸಲಕರಣೆ ಪಡೆದ ಮಕ್ಕಳನ್ನು ಹೊರತುಪಡಿಸಿ) ಇದರ ಸದುಪಯೋಗವನ್ನು ಪಡೆಯಬಹುದೆಂದು ಬಿಇಓ ರಮೇಶ್ ಮತ್ತು ಬಿಆರ್‌ಸಿ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರು ತಿಳಿಸಿರುತ್ತಾರೆ.
==
ವಾಯು ಮಾಲಿನ್ಯ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ
ಶಿವಮೊಗ್ಗ ನವೆಂಬರ್ 08
ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿ ಯಲ್ಲಿ ನ.04 ರಂದು ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಆಚರಣೆ ನಡೆಸಲಾಯಿತು
ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಭೀಮನ ಗೌಡ ಪಾಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮುರಗೇಂದ್ರ ಬಿ. ಶಿರೋಲ್ಕಾರ್, ಕಚೇರಿಯ ಅಧೀಕ್ಷಕರಾದ ರಾಮಚಂದ್ರಪ್ಪ ಎಚ್.ಸಿ, ಕಚೇರಿಯ ಅಧೀಕ್ಷಕರಾದ ಶ್ರೀಮತಿ ರಮ್ಯಾ, ಕಚೇರಿಯ ಸಿಬ್ಬಂದಿಗಳು, ಚಾಲನ ತರಬೇತಿಯ ಮುಖ್ಯಸ್ಥರು, ಶೋರೂಂ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.