ಶಿವಮೊಗ್ಗ: ಶ್ರೀ ರಾಮಕೃಷ್ಣ ವಿದ್ಯಾಶ್ರಮ, ಶ್ರೀ ರಾಮಕೃಷ್ಣ ವಿದ್ಯಾಕೇತನ ವಸತಿ ವಿದ್ಯಾಲಯ ವತಿಯಿಂದ ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ನ.13,14 ರಂದು ಶಾರದಾ ಮಾತೆಯ ಜಯಂತ್ಯುತ್ಸವ, ಶಾಲಾ ವಾರ್ಷಿಕೋತ್ಸವ, ಚಿಣ್ಣರ ಚೈತನ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಮಕೃಷ್ಣ ವಿದ್ಯಾಕೇತನ ಅಧ್ಯಕ್ಷ ಡಾ.ಡಿ.ಆರ್. ನಾಗೇಶ್ ತಿಳಿಸಿದ್ದಾರೆ.
ನ.13 ರಂದು ಸಂಜೆ 4 ಗಂಟೆಗೆ ಪ್ಲೇ ಹೋಂ, ಪ್ರಿ.ಕೆ.ಜಿ, ಎಲ್. ಕೆ.ಜಿ. 1,3,5,7,9ನೇ ತರಗತಿ ವಿದ್ಯಾರ್ಥಿಗಳಿಂದ ಚಿಣ್ಣರ ಚಿಲುಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2023-24ನೇ ಸಾಲಿನ ಎಲ್.ಕೆ.ಜಿಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನಡೆಯಲಿದೆ ಎಂದ ಅವರು, ಕಲ್ಲುಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷ ವಿನಯಾನಂದ ಸರಸ್ವತಿ ಮಹಾರಾಜ್ ದಿವ್ಯ ಸಾನಿಧ್ಯ ವಹಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ( ಆಡಳಿತ) ಎಸ್. ಆರ್.ಮಂಜುನಾಥ ಕಾರ್ಯಕ್ರಮ ಉದ್ಘಾಟಿಸುವರು. ರಾಮಕೃಷ್ಣ ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಹಿನ್ನಲೆ ಗಾಯಕ ವಿಶಾಖ್ ನಗಲಾಪುರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ರಾಮಕೃಷ್ಣ ವಿದ್ಯಾಕೇತನ ಸದಸ್ಯ ಡಿ.ಎಂ.ದೇವರಾಜ, ಕಾರ್ಯದರ್ಶಿ ಶೋಭಾ ವೆಂಕಟರಮಣ, ರಾಮಕೃಷ್ಣ ವಿದ್ಯಾಕೇತನ ಅಧ್ಯಕ್ಷ ಡಾ.ಡಿ.ಆರ್. ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದ್ದಾರೆ.
ನ.14ರಂದು ಸಂಜೆ 4 ಗಂಟೆಗೆ ಯುಕೆಜಿ, 2,4,6,8,10ನೇ ತರಗತಿ ಹಾಗೂ ಐಟಿಐ ವಿದ್ಯಾರ್ಥಿಗಳಿಂದ ವೈವಿಧ್ಯಮಯ ರಂಗೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಇರಲಿದೆ. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ದಾವಣಗೆರೆ ಲ್ಯುಮಿಕ್ ಇನ್ಫೋ ಸಲ್ಯೂಷನ್ಸ್ ಸಂಸ್ಥಾಪಕ ಎಸ್.ನಾಗರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಎಲ್ಲಾ ಕಾರ್ಯಕ್ರಮಗಳು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—-