ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಜೀವನ ಪ್ರಮಾಣ ಪತ್ರ

ಶಿವಮೊಗ್ಗ, ನವೆಂಬರ್ 12, :  ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ  ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವ ವ್ಯವಸ್ಥೆಯನ್ನು ಮಾಡಿದೆ.


ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ಮನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಓ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದಾಗಿದೆ. ತಮ್ಮಲ್ಲಿರುವ ಮೊಬೈಲ್ ಮುಖಾಂತರ ಜೀವನ ಪ್ರಮಾಣ ಪತ್ರ ಮಾಡಿ ಕೊಡುವ ವ್ಯವಸ್ಥೆಯಲ್ಲಿ ಯಾವುದೆ ಕಾಗದ ಪತ್ರವನ್ನು ಕೊಡಬೇಕಾಗಿಲ್ಲ.  ಡಿಜಿಟಲ್ ಜೀವನ ಪ್ರಮಾಣ ಪತ್ರವು ಪಿಂಚಣಿ ಪಡೆಯುವ ಕಚೇರಿಗೆ ತಂತ್ರಾಂಶ ಮೂಲಕ ರವಾನೆಯಾಗುವುದು ಹಾಗೂ ಮೊಬೈಲ್ ಗೆ ಇದರ ವಿವರ ಸಂದೇಶದ ಮೂಲಕ ಬರುತ್ತದೆ.


ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ  ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ಮನ್ ಮೂಲಕ ಕೇವಲ ರೂ. 70/- (ಜಿಎಸ್‌ಟಿ ಸೇರಿದಂತೆ) ಶುಲ್ಕನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಪ್ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಶಿವಮೊಗ್ಗ ಅಂಚೆ ಇಲಾಖಾ ಕಚೇರಿಯ ಸೂಪರಿಟೆಂಡೆAಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  
ಮಾಹಿತಿಗಾಗಿ ಹತ್ತಿರದ ವಿಭಾಗೀಯ ಕಚೇರಿಯನ್ನು ಅಥವಾ ಇಮೇಲ್ doshimoga.ka@indiapost.gov.in  ಮೂಲಕ ಸಂಪರ್ಕಿಸಬಹುದಾಗಿದೆ.

——————————

ನ.14 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ನವೆಂಬರ್ 12, ಶಿವಮೊಗ್ಗ ನಗರ ಉಪವಿಭಾಗ -2ರ ಘಟಕ 5 ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ನ.14 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆರ್.ಎಂ.ಎಲ್.ನಗರ, ಮಂಡ್ಲಿ ವೃತ್ತ, ಬೈಪಾಸ್, ಎನ್.ಟಿ.ರಸ್ತೆ, ಮಾರ‍್ನಮಿಬೈಲು, ಜೆ.ಸಿ.ನಗರ, ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಪಿಯರ್‌ಲೈಟ್ ಫ್ಯಾಕ್ಟರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
———
ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಅರ್ಜಿ ಆಹ್ವಾನ
ಶಿವಮೊಗ್ಗ, ನವೆಂಬರ್ 12:  ಜಿಲ್ಲಾ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಗಾಂಧಿಪಾರ್ಕ್ನಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳಿAದ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ.


ಆಸಕ್ತ ಅರ್ಹ ರೈತ ಉತ್ಪಾದಕ ಸಂಸ್ಥೆಗಳು ನ.27ರೊಳಗಾಗಿ ಕ.ಪ.ಪ್ರೊ.ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9902546944 ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!