ಶಿವಮೊಗ್ಗ: ’ವಿಕಸಿತ ಭಾರತ’ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಧ್ಯೇಯ ವಾಕ್ಯದೊಂದಿಗೆ ಈ ಬಾರಿ ಜಿಲ್ಲೆಯಲ್ಲಿ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರ ನಾಳೆಯಿಂದ ನ.೨೦ರವರೆಗೆ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ವಾಟಗೋಡು ಸುರೇಶ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ, ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಪ್ತಾಹ ಆಚರಿಸಲಾಗುತ್ತಿದೆ ಎಂದರು.
ನ. ೧೪.ರ ನಾಳೆ ಬೆಳಿಗ್ಗೆ ೧೦.೩೦ಕ್ಕೆ ಸೊರಬದ ರಂಗಮಂದಿರದಲ್ಲಿ ಸಪ್ತಾಹವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ
ಉದ್ಘಾಟಿಸಲಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥ್‌ಗೌಡ ಸಹಕಾರ ಧ್ವಜಾರೋಹಣ ನೆರವೇರಿಸುವರು. ನ.೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಸಾಗರದ ಈಡಿಗರ ಸಭಾ ಭವನದಲ್ಲಿ ನಡೆಯುವ ಸಪ್ತಾಹವನ್ನು ಶಾಸಕ ಬೇಳೂರು ಗೋಪಾಲಕೃ? ಉದ್ಘಾಟಿಸುವರು ಎಂದರು.
ನ.೧೬ರ ಬೆಳಿಗ್ಗೆ ೧೦.೩೦ಕ್ಕೆ ಶಿಕಾರಿಪುರದಲ್ಲಿ ನಡೆಯುವ ಸಪ್ತಾಹವನ್ನು ಶಾಸಕ ಬಿ.ವೈ.ವಿಜಯೇಂದ್ರ ಉದ್ಘಾಟಿಸಲಿದ್ದು, ನ.೧೭ರಂದು ಶಿವಮೊಗ್ಗದ ಡಿಸಿಸಿ ಬ್ಯಾಂಕ್‌ನಲ್ಲಿ ನಡೆಯುವ ಸಪ್ತಾಹ ಸಮಾರಂಭವನ್ನು ಶಾಸಕ ಎಸ್.ಎನ್.ಚನ್ನಬಸಪ್ಪ, ೧೮ರಂದು ತೀರ್ಥಹಳ್ಳಿಯ ಸಹ್ಯಾದ್ರಿ ವಿವಿದೋದ್ದೇ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಶಾಸಕ ಅರಗ ಜ್ಞಾನೇಂದ್ರ, ನ.೧೯ರಂದು ಹೊಸನಗರ ತಾಲೂಕಿನ ಬಟ್ಟೆ ಮಲ್ಲಪ್ಪ ಸಂತೆ ಮೈದಾನದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥ್‌ಗೌಡ ಹಾಗೂ ನ.೨೦ರಂದು
ಭದ್ರಾವತಿಯ ತರಿಕೇರೆ ರಸ್ತೆಯಲ್ಲಿರುವ ಶ್ರೀ ಪಾಂಡುರಂಗ ಕಲ್ಯಾಣ ಮಂದಿರದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಸಪ್ತಾಹ ಸಮಾರಂಭವನ್ನು ಉದ್ಘಾಟಿಸುವರು ಎಂದರು.
ಪ್ರತಿ ತಾಲೂಕಿನಲ್ಲಿ ನಡೆಯುವ ಸಹಕಾರ ಸಪ್ತಾಹದ ಆಚರಣೆಯ ಕಾರ್ಯಕ್ರಮದಲ್ಲಿ ಆಯಾ ತಾಲೂಕಿನಲ್ಲಿ ಸಹಕಾರ ಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಉತ್ತಮ ಸಹಕಾರಿ, ಉತ್ತಮ ಸಹಕಾರ ಸಂಘ, ಉತ್ತಮ ನೌಕರ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್‌ನ ಉಪಾಧ್ಯಕ್ಷ ಹೆಚ್.ಎಸ್.ಸಂಜೀವ್‌ಕುಮಾರ್, ನಿರ್ದೇಶಕರಾದ ಜಯರಾಮ್, ಪಿ.ವೀರಮ್ಮ, ಡಿ.ಎಸ್.ಈಶ್ವರಪ್ಪ, ಎಸ್.ಎಲ್.ನಿಖಿಲ್ ಇನ್ನಿತರರು ಉಪಸ್ಥಿತರಿದ್ದರು.