ಶಿವಮೊಗ್ಗ, ನ.೧೪:
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್  ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಆರು ಸ್ಕೇಟರ್‌ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೊದಲ ಹಂತದಲ್ಲೇ ಐದರಿಂದ ಏಳು ವರ್ಷ ವಯೋಮಿತಿಯ ಕ್ರೀಡಾಕೂಟದಲ್ಲಿ ನಮ್ಮ ಶಿವಮೊಗ್ಗ ತಂಡದ ಹಿತಾ ಪ್ರವೀಣ್ ಎರಡು ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ೧೭ ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ತಂಡದ ರಾಗಶ್ರೀ ಎಸ್. ಅವರು ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ವಿಶೇಷವಾಗಿದೆ.


ಈ ಪಂದ್ಯಾವಳಿಯಲ್ಲಿ ೧೧-೧೪ ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಸೈಯದ್ ಪೈಜಲ್ ಎರಡು ಕಂಚು ಹಾಗೂ ಒಂದು ಬೆಳ್ಳಿ ಪದಕವನ್ನು ಪಡೆದಿದ್ದು, ದಾನೇಶ್ ಎಚ್ ಶೆಟ್ಟಿ ಅವರು ೧೪-೧೭ ವರ್ಷ ವಯೋಮಿತಿಯ ಪಂದ್ಯದಲ್ಲಿ ಒಂದು ಕಂಚಿನ ಪದಕ ಪಡೆದಿದ್ದಾರೆ. ೧೭ ವರ್ಷ ವಯೋಮಿತಿಯ ಪಂದ್ಯದಲ್ಲಿ ಸಾಧನ ಎಸ್. ಒಂದು ಕಂಚಿನ ಪದಕ ಪಡೆದಿದ್ದರೆ ೯-೧೧ ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನೀಲಾಸಂಪತ್ ಒಂದು ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟದ ಆಯ್ಕೆಗೆ ಪಾತ್ರರಾಗಿದ್ದಾರೆ.


೧೧-೧೪ ವರ್ಷ ವಯೋಮಿತಿಯ ಪಂದ್ಯದಲ್ಲಿ ವೇದಾಂಶ್ ಗಜೇಂದ್ರ ಪೆರಡಿ ಒಂದು ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ಶಿವಮೊಗ್ಗ ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಕಲಿಯುತ್ತಿರುವ ಈ ಮಕ್ಕಳಿಗೆ ವಿಶ್ವಾಸ್ ಆರ್. ಹಾಗೂ ಆತೀಶ್ ಆರ್. ಅವರು ತರಬೇತಿ ನೀಡುತ್ತಿದ್ದಾರೆ.
ನಮ್ಮ ಶಿವಮೊಗ್ಗ ಸ್ಟೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್‌ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ. ವೈ. ರಾಘವೇಂದ್ರ ಅವರು ಪ್ರಶಂಸಿಸಿ ಅವರ ಕ್ರೀಡಾ ಜಗತ್ತು ಇನ್ನಷ್ಟು ಉತ್ತಮವಾಗಲೆಂದು ಶುಭ ಹಾರೈಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಹಾಗೂ ಸಂಸ್ಥೆಯ ಗೌರವಕ್ಕೆ ಕಾರಣವಾದ ಎಲ್ಲಾ ಸ್ಟೇಟರ್‌ಗಳನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಕೆ.ಎಚ್. ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ರವಿ ಮತ್ತು ಪದಾಧಿಕಾರಿಗಳು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾದ ರೇಖ್ಯಾನಾಯ್ಕ್ ಅವರು ಅಭಿನಂದಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!