ಶಿವಮೊಗ್ಗ ನ.16 : ಪ್ರಚೋದನಾ ಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್. ಕ್ರಿ ಈಶ್ವರಪ್ಪ ಅವರ ವಿರುದ್ಧ ಸುಮೊಟೋ ದೂರು ದಾಖಲಾಗುತ್ತಿದ್ದಂತೆ ಅವರ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಬೀದಿಗಿಳಿದಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮೆರವಣಿಗೆ ನಡೆಸುವ ಮೂಲಕ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.
ಶುಕ್ರವಾರ ಸಂಜೆ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಅಶೋಕ ವೃತ್ತದಿಂದ ಹೊರಟು ಸಾಗರ ರಸ್ತೆ ಮೂಲಕ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ತನಕ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರು, ಕೋಮು ಪ್ರಚೋದನೆಯ ಹೇಳಿಕೆ ಆರೋಪದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಮೊಟೋ (ಸ್ವಯಂ ಪ್ರೇರಿತ)ದೂರು ದಾಖಲಿಸಿ ಕೊಂಡಿ ರುವ ಪೆÇಲೀಸರು ತಕ್ಷಣವೇ ಅವರನ್ನು ಬಂಧಿಸು ವಂತೆ ಒತ್ತಾಯಿಸಿದರು.
ಕೈಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು, ಈಶ್ವರಪ್ಪ ಅವರ ವಿರುದ್ದ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಕೈ ಕಟ್ಟಿ ಕೂರುವುದಿಲ್ಲ, ಕೋಮು ಪ್ರಚೋದನೆಯ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರಲ್ಲದೆ, ಈಶ್ವರಪ್ಪ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಬೇಕೆಂದು ಕಿಡಿಕಾರಿದರು. ಮೆರವಣಿಗೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಹಿರಿಯರಾದ ಕೆ.ಎಸ್. ಈಶ್ವರಪ್ಪ ತಾವೊಬ್ಬ ಅನುಭವಿ ರಾಜಕಾರಣಿ ಎನ್ನುವುದನ್ನೇ ಮರೆತಿದ್ದಾರೆ. ಇತ್ತೀಚೆಗೆ ಅವರು ವಿಚಿತ್ರವಾಗಿ ಮಾತನಾಡುತ್ತಿದ್ದಾರೆ.ಸದಾ ಕೋಮು ಪ್ರಚೋದನೆಯ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಾಯಕರನ್ನು ಹೊಡೆಯಿರಿ, ಕಡಿಯಿರಿ ಎಂದು ಹೇಳಿಕೆ ನೀಡುತ್ತಿದ್ದಾರೆಂದು ಆರೋಪಿಸಿದರು.
ಅವರ ಇಂತಹ ಹೇಳಿಕೆಗಳ ಹಿನ್ನೆಲೆಯಲ್ಲಿಯೇ ಈಗ ಅವರ ವಿರುದ್ಧ ಪೆÇಲೀಸರು ಸುಮೋಟೊಕೇಸು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣವೇ ಪೆÇಲೀಸರು ಎಫ್ ಐ ಆರ್ ದಾಖಲು ಮಾಡಬೇಕು, ಅದರ ಜತೆಗೆ ಅವರನ್ನು ತಕ್ಷಣವೇ ಬಂSಸಿ ಬೇಕೆಂದು
ಆಗ್ರಹಿಸಿದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ನಾಯಕರನ್ನು ಹಾಗೂ ಕೋಮು ಗಲಭೆಗೆ ಪ್ರಚೋದಿಸುತ್ತಿರುವ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದರು. ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಎಸ್. ಸುಂದರೇಶ್, ಎನ್. ರಮೇಶ್ ,ರಮೇಶ್ ಹೆಗಡೆ, ಇಕ್ಕೇರಿ ರಮೇಶ್, ಕಲೀಂ ಪಾಷಾ, ಜಿ.ಡಿ. ಮಂಜುನಾಥ್ , ಎಸ್.ಟಿ.ಚಂದ್ರಶೇಖರ್, ಎಸ್.ಟಿ. ಹಾಲಪ್ಪ, ಕೆ.ರಂಗನಾಥ್, ಹೆಚ್.ಸಿ. ಗಿರೀಶ್, ಎಸ್. ಪಿ. ಶೇಷಾದ್ರಿ ಸೇರಿದಂತೆ ಮಹಿಳಾ ಕಾಂಗ್ರೆಸ್ ಮುಖಂಡರಾದ ಅರ್ಚನಾ ಇದ್ದರು.