ಶಿವಮೊಗ್ಗ ನವೆಂಬರ್ 19 ಪರಿಶಿ? ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿ? ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರುWWW.SSP.Karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದಾಖಲಾತಿಗಳನ್ನು ದೃಢೀಕರಣ ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿ, ಮೂಲ ದಾಖಲಾತಿಗಳೊಂದಿಗೆ ಈ ಕಛೇರಿಗೆ ಹಾಜರಾಗಿ ಇ-ದೃಢೀಕರಣವನ್ನು ಪಡೆಯಲು ಸೂಚಿಸಿದೆ.
ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. ೨೦೦೪ರವರೆಗೆ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. ೨೦೧೦ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಹೊರ ರಾಜ್ಯಗಳಲ್ಲಿ ೧೦ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ/ಪದವಿ/ಇತರೆ ಕೋರ್ಸುಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತಿರುವ ವಿದ್ಯಾರ್ಥಿಗಳು, ಹೊರ ರಾಜ್ಯ
ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಸ್ಟಾಂಡ್ ಅಲೊನ್ ಇನ್ಸ್ಟಿಟ್ಯೂಟ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾಖಲೆಗಳನ್ನು ನೀಡಬೇಕು ಎಂದು ಜಿಲ್ಲಾ ಪರಿಶಿ? ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.