ಬೆಂಗಳೂರು : ಶಿವಮೊಗ್ಗ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೋರಿ ಡಾ ಕೆ.ಬಿ. ವಿಜಯ್ ಕುಮಾರ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ ಎನ್ ಒಕಾ ಹಾಗೂ ನ್ಯಾಯಾಧೀಶ ಸಚಿನ್ ಶಂಕರ್ ಮಗದುಮ್ ರಾಜ್ಯದ ಎಲ್ಲಾ ಕ್ವಾರಿಗಳ ಸರ್ವೆ ನಡೆಸಿ ವರದಿ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಕ್ವಾರಿಗಳಲ್ಲಿ ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆಯೋ, ನಿಯಮ ಪಾಲಿಸದ ಕ್ವಾರಿಗಳ ಮೇಲೆ ಕೈಗೊಂಡ ಕ್ರಮವೇನು..? ಈ ಬಗ್ಗೆ 1 ತಿಂಗಳುಗಳ ವರದಿ ನೀಡಲು ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ ಎನ್ನಲಾಗಿದೆ
ಈ ಸಂಬಂಧ ಕೋರ್ಟ್ ಪ್ರಶ್ನೆಗೆ ಉತ್ತರ ನೀಡಿದ ಸರ್ಕಾರ ಪರ ವಕೀಲರು ಈಗಾಗಲೇ ಡ್ರೋಣ್ ಸರ್ವೆ ನಡೆಸುತ್ತಿರುವುದಾಗಿ ತಿಳಿಸಿದರು ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹೆಚ್ಚುತ್ತಿದ್ದು, ಕ್ವಾರಿಯಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತಿರುವ ಬಗ್ಗೆ ಜನರ ದೂರು ಪರಿಗಣಿಸಲು ಸೂಕ್ತ ವ್ಯವಸ್ಥೆ ರೂಪಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ ಎನ್ನಲಾಗಿದೆ.
ಜಿಲ್ಲೆಯ ಹುಣಸೋಡ ಕಲ್ಲು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ 8 ಕಾರ್ಮಿಕರು ಮೃತಪಟ್ಟಿದ್ದರು.