ಶಿವಮೊಗ್ಗ:n 27: ಸಾಂಸ್ಕೃತಿಕ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ಜತೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕಾರ್ಯ ಶ್ಲಾಘನೀಯ ಎಂದು ನಮ್ಮ ಕನಸಿನ ಶಿವಮೊಗ್ಗದ ಅಧ್ಯಕ್ಷ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.


ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶ್ರೀ ಶಂಕರನಾರಾಯಣ ಕಾಶಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮಥುರಾ ಪ್ಯಾರಾಡೈಸ್ ರಜತ ಮಹೋತ್ಸವ, ಕನ್ನಡ ರಾಜ್ಯೋತ್ಸವ, ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಜತೆಯಲ್ಲಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಸಾಧಕರನ್ನು ಗುರುತಿಸುವ ಕೆಲಸವನ್ನು ಶಂಕರನಾರಾಯಣ ಕಾಶಿ ಟ್ರಸ್ಟ್ ಮಾಡುತ್ತಿದೆ. ಸಮಾಜಮುಖಿ ಕೆಲಸವನ್ನು ನಿರಂತರವಾಗಿ ಮುಂದುವರೆಸಲಿ ಎಂದು ಆಶಿಸಿದರು.


ಮಥುರಾ ಪ್ಯಾರಾಡೈಸ್ ರಜತ ಮಹೋತ್ಸವ ವರ್ಷಾಚಾರಣೆಯನ್ನು ನಗರದ ವಿವಿಧ ಸಂಘ ಸಂಸ್ಥೆಗಳು ಆಚರಿಸಿ ಸೇವಾ ಕಾರ್ಯಗಳನ್ನು ನಡೆಸುತ್ತಿವೆ. ಶಂಕರನಾರಾಯಣ ಕಾಶಿ ಟ್ರಸ್ಟ್ ವತಿಯಿಂದಲೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ರಜತ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ ಎಂದರು.


ಕ್ರಾಂತಿದೀಪ ಪತ್ರಿಕೆಯ ಸಂಪಾದಕ, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತ ಎನ್.ಮಂಜುನಾಥ್ ಮಾತನಾಡಿ, ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಹಾಗೂ ಹಲವು ಯೋಜನೆಗಳ ಮಂಜೂರಾತಿಯಲ್ಲಿ ಮಥುರಾ ಪ್ಯಾರಾಡೈಸ್ ಶಕ್ತಿಕೇಂದ್ರವಾಗಿ ಕೆಲಸ ಮಾಡಿದೆ. ನಮ್ಮ ಕನಸಿನ ಶಿವಮೊಗ್ಗ ತಂಡ ರಚಿಸಿಕೊಂಡು ಆಗಬೇಕಿರುವ ಕೆಲಸಗಳ ಬಗ್ಗೆ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಉಮಾಶಂಕರ ಉಪಾಧ್ಯ, ನಿರ್ಮಲಾ ಕಾಶಿ ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!