ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ನವೆಂಬರ್ 28; ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ನವುಲೆ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಇಂದಿರಾನಗರ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ನವುಲೆ ಬಿ.ಸಿ.ಎಮ್. ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


——————
ಶಿಶು ಅಭಿವೃದ್ಧಿ ಯೋಜನೆ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ
ಶಿವಮೊಗ್ಗ, ನವೆಂಬರ್ 28;ಭದ್ರಾವತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ತಾತ್ಕಾಲಿಕವಾಗಿ ಆಯ್ಕೆಯಾಗಿರುವ 7 ಜನ ಅಂಗನವಾಡಿ ಕಾರ್ಯಕರ್ತೆಯರ, 3 ಜನ ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 72 ಜನ ಸಹಾಯಕಿಯರ ಸ್ಥಾನಗಳ ತಾತ್ಕಾಲಿಕ ಪಟ್ಟಿಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಆಯ್ಕೆ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಡಿ. 04 ರೊಳಗಾಗಿ ಕಚೇರಿ ಲಿಖಿತವಾಗಿ ಸಲ್ಲಿಸುವಂತೆ ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೃಷಿ ಇಲಾಖೆ ಹಿಂಭಾಗ, ತರೀಕೆರೆ ರಸ್ತೆ, ಭದ್ರಾವತಿ ಇಲ್ಲಿ ಸಂಪರ್ಕಿಸುವುದು.


—————-
ಡ್ರೋನ್ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ, ನವೆಂಬರ್ 28;: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿ.10 ರೊಳಗಾಗಿ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ಲತಾ ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:08182-200266 / 9482762350 ಗಳನ್ನು ಸಂಪರ್ಕಿಸುವುದು.
————–