ಸಾಗರ ಪಟ್ಟಣದ ಅಣಲೆಕೊಪ್ಪ ಗ್ರಂಥಾಲಯ ಸೇವೆ ತಾತ್ಕಾಲಿಕ ಸ್ಥಗಿತ
ಶಿವಮೊಗ್ಗ ನವೆಂಬರ್. 29; ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಸಾಗರ ಪಟ್ಟಣದ ಅಣಲೆಕೊಪ್ಪ ಬಡಾವಣೆಯಲ್ಲಿರುವ ಶಾಖಾ ಗ್ರಂಥಾಲಯದ ವಿಸ್ತರಣಾ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ನ.29 ರಿಂದ ಡಿ.25 ವರಗೆ ಶಾಖಾ ಗ್ರಂಥಾಲಯದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ.


ಸಾಗರ ಪಟ್ಟಣದ ಕೋರ್ಟ್ ಎದುರುಗಡೆ ಇರುವ ಸಾರ್ವಜನಿಕ ಶಾಖಾ ಗ್ರಂಥಾಲಯವು ಎಂದಿನAತೆ ಕಾರ್ಯನಿರ್ವಹಿಸುತ್ತಿದ್ದು, ಓದುಗರು ಅದರ ಉಪಯೋಗ ಪಡೆಯಬಹುದಾಗಿರುತ್ತದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—

ಡಿ.01 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ನವೆಂಬರ್ 29; ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.01 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ, ಜಯಂತಿಗ್ರಾಮ,
ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.