ಶಿವಮೊಗ್ಗ,ನ.30:
ಶಿವಮೊಗ್ಗದ ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ವತಿಯಿಂದ ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲ ವಸತಿ ಶಾಲೆಯಲ್ಲಿ ಡಿ. ಒಂದರ ನಾಳೆ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಗುರುಕುಲ ವಸತಿ ವಿದ್ಯಾಲಯದ 600 ವಿದ್ಯಾರ್ಥಿಗಳು ತಯಾರಿಸಿರುವ ನಾಲ್ಕು ಸಾವಿರಕ್ಕೂ ಹೆಚ್ಚು ಭಿನ್ನ ವಿಭಿನ್ನ, ವಿಷಯವಾರು ವಸ್ತು ಪ್ರದರ್ಶನಗಳು, ಪ್ರಾಯೋಗಿಕ ಪ್ರದರ್ಶನಗಳು ಪ್ರದರ್ಶನಗೊಳ್ಳಲಿವೆ.
ಕನ್ನಡ ಆಂಗ್ಲ ಹಾಗೂ ವಿಶೇಷವಾಗಿ ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನದ ವಿಷಯವಾರು ವಸ್ತು ಪ್ರದರ್ಶನ ಇದಾಗಿದ್ದು ಇಡೀ ದಿನ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.


ಬೆಳಿಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಪೇಸ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಕಾರ್ಯದರ್ಶಿಗಳಾದ ಪ್ರೊ. ಬಿ.ಎನ್. ವಿಶ್ವನಾಥಯ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಮೀಡಿಯಂ ವಾಹಿನಿಯ ಪ್ರಧಾನ ಸಂಪಾದಕ ಹೊನ್ನಾಳಿ ಚಂದ್ರಶೇಖರ್ ಭಾಗವಹಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ಅವರು ಪ್ರಾಸ್ತಾವಿಕವಾಗಿ ಗುರುಕುಲ ಶಾಲೆಯ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಲಿದ್ದಾರೆ.

ಟ್ರಸ್ಟ್ ನ ಅಧ್ಯಕ್ಷ ಡಾಕ್ಟರ್ ಡಿ ಆರ್ ನಾಗೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಈ ಸಂದರ್ಭದಲ್ಲಿ ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲ ವಸತಿ ಶಾಲೆಯ ನಿರ್ದೇಶಕರುಗಳಾದ ಕೆ.ಎಚ್. ಅರುಣ್ ಹಾಗೂ ಕೆ.ಡಿ. ಶರತ್, ಮುಖ್ಯ ಶಿಕ್ಷಕರಾದ ವೆಂಕಟೇಶ್, ತೀರ್ಥೇಶ್, ಗಜೇಂದ್ರನಾಥ್ ಅವರು ಉಪಸ್ಥಿತರಿರಲಿದ್ದಾರೆ.