ಶಿವಮೊಗ್ಗ, ಡಿಸೆಂಬರ್ ೦೪; ): ಶಿವಮೊಗ್ಗ ಮಾಚೇನಹಳ್ಳಿ ೧೧೦/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.೦೫ ರಂದು ಬೆಳಗ್ಗೆ ೦೬.೦೦ ರಿಂದ ಸಂಜೆ ೬.೦೦ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ, ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಡಿ.೦೫ ರಂದು ವಿದ್ಯುತ್ ವ್ಯತ್ಯಯ
ಕೇಂದ್ರೀಯ ಸೈನಿಕ ಮಂಡಳಿಗೆ ಜೀವಿತ ಪ್ರಮಾಣಪತ್ರ ಸಲ್ಲಿಸಲು ಸೂಚನೆ
ಶಿವಮೊಗ್ಗ, ಡಿಸೆಂಬರ್ ೦೪; ಕೇಂದ್ರೀಯ ಸೈನಿಕ ಮಂಡಳಿಯಲ್ಲಿ ಪೆನುರಿ ಅನುದಾನ, ೧೦೦% ಅಂಗವಿಕಲ ಮಕ್ಕಳ ಅನುದಾನ ಹಾಗೂ ಅನಾಥ ಮಕ್ಕಳ ಅನುದಾನಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ೨೦೨೪-೨೫ನೇ ಸಾಲಿನ ಅನುದಾನ ನವೀಕರಣಕ್ಕಾಗಿ ಜೀವಿತ ಪ್ರಮಾಣ ಪತ್ರವನ್ನು ದಿ :೦೧/೧೨೨೦೨೪ ರಿಂದ ದಿ :೩೧/೦೩/೨೦೨೫ ರೊಳಗಾಗಿ ಸಲ್ಲಿಸಬೇಕಾಗಿದ್ದು, ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಮೂಲ ದಾಖಲೆಗಳೊಂದಿಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಗೆ ಭೇಟಿ ನೀಡಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ಊಖಿಖಿPS://ಔಓಐIಓಇ.ಏSಃ.ಉಔಗಿ.Iಓ ವನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ ೦೮೧೮೨-೨೨೦೯೨೫ ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಡಿಸೆಂಬರ್ ೦೪; (ಕರ್ನಾಟಕ ವಾರ್ತೆ): ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಡಿ. ೦೬ ರಂದು ಬೆಳಗ್ಗೆ ೯.೦೦ ರಿಂದ ಸಂಜೆ ೬.೦೦ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದಿನನಿತ್ಯದ ಒತ್ತಡದಿಂದ ಹೊರಬರಲು ಕ್ರೀಡಾಕೂಟ ಸಹಕಾರಿ – ಸಿಇಓ ಹೇಮಂತ್
ಶಿವಮೊಗ್ಗ ಡಿಸೆಂಬರ್ ೦4 ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ವಾರ್ಷಿಕ ಪೋಲಿಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೋಲಿಸ್ ಇಲಾಖೆ ಒಂದು ಶಿಸ್ತಿನ ಇಲಾಖೆಯಾಗಿದ್ದು, ವಿರಾಮವಿಲ್ಲದೆ ಸದಾಕಾಲವೂ ಒತ್ತಡದ ನಡುವೆ ಕರ್ತವ್ಯವನ್ನು ನಿರ್ವಹಿಸುವ ಪೋಲಿಸ್ ಸಿಬ್ಬಂದಿಗಳಿಗೆ ಈ ರೀತಿ ಕ್ರೀಡಾಕೂಟ ಒತ್ತಡದಿಂದ ಹೊರಬರಲು ಸಹಕಾರಿಯಾಗಿದೆ.
ವಾರ್ಷಿಕ ಕ್ರೀಡಾಕೂಟ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಯಲು ಕಾರಣವಾಗುತ್ತದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಹೊಂದಾಣಿಕೆಯಿಂದ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮುಂದಿನ ದಿನಗಳಲ್ಲಿ ತಮ್ಮ ಕರ್ತವ್ಯದಲ್ಲಿ ಸಮನ್ವಯತೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಕ್ರೀಡಾಕೂಟ ಸ್ಪರ್ಧೆಯಲ್ಲ, ಮನೋರಂಜನೆ. ಇದರಲ್ಲಿ ಪ್ರತಿಯೊಬ್ಬರು ಸಂಭ್ರಮ ಮತ್ತು ಉತ್ಸಾಹದಿಂದ ಭಾಗವಹಿಸಿ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಒಂದು ವೇದಿಕೆಯಾಗಿದೆ. ಎಲ್ಲರೂ ಒತ್ತಡ ರಹಿತವಾಗಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾ ಜ್ಯೋತಿಯನ್ನು ನೀಡಿ ಪುರು?ರ ೮೦೦ ಮೀಟರ್ ಓಟಕ್ಕೆ ಚಾಲನೆ ನೀಡುವ ಮೂಲಕ ಕ್ರೀಡಾಕೂಟವನ್ನು ಆರಂಭಿಸಲಾಯಿತು.
ಈ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೋಲಿಸ್ ವರಿ?ಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರ್ಯಾಪ್ಪ ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯ ಸಿಬ್ಬಂದಿಗಳು, ಮಹಿಳಾ ಪೋಲಿಸರು ಉಪಸ್ಥಿತರಿದ್ದರು. (ಛಾಯಾಚಿತ್ರ ಲಗತ್ತಿಸಿದೆ)