ಹೊಸನಗರ d.7 : ದೇಶದ ಪ್ರತಿ ಗ್ರಾಮದ ಮನೆಗೂ ಶುದ್ದ ಕುಡಿಯುವ ನೀರನ್ನು ನಲ್ಲಿಗಳ ಮೂಲಕ ಸರಬರಾಜು ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮೀಷನಿನ (ಜೆಜೆಎಂ) ರೂ 45 ಲಕ್ಷ ಅನುದಾನದ ಕಾಮಗಾರಿಗೆ
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ತಾಲೂಕಿನ ಸುಳಗೋಡು ಗ್ರಾಮದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಸದಸ್ಯ ಬಂಕ್ರಿಬೀಡು ಮಂಜುನಾಥ್, ಶಾಸಕರ ಆಪ್ತ ಕಾರ್ಯದರ್ಶಿ ಬಸವರಾಜ್ ಸೇರಿದಂತೆ ಹಲವು ಗ್ರಾಮದ ಪ್ರಮುಖರು ಹಾಜರಿದ್ದರು.