ಶಿವಮೊಗ್ಗ,ಡಿ.10: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ರಾಜ್ಯ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.28 ಮತ್ತು 29ರಂದು ಬೆಂಗಳೂರಿನ ಬಾಗಲೂರು ವಿಜೆ ಇಂಟರ್‍ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪರಿಷತ್ತ್‍ನ ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಹೇಳಿದರು.
ಅವರು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ವಿಜ್ಞಾನ ಪರಿಷತ್ತು ಆರಂಭವಾಗಿ 4 ವರ್ಷಗಳಾಗಿವೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಶಾಖೆಗಳನ್ನು ಆರಂಭಿಸಲಾಗಿದೆ. ಸಾವಿರಾರು ಸದಸ್ಯರನ್ನು ಹಲವರಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. ಈಗ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಐತಿಹಾಸಿಕವಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಸಾಂಸ್ಕøತಿಕ ರಾಯಭಾರಿಯಾಗಿರುವ ಅವರು ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಷಯವಾಗಿದೆ. ಸಮ್ಮೇಳನದಲ್ಲಿ ಚಿಂತನಗೋಷ್ಠಿಗಳು, ಸಾಂಸ್ಕøತಿಕ ಕಾರ್ಯಕ್ರಮಗಳು, ನಾಟಕ ಪ್ರದರ್ಶನ, ಹಾಸ್ಯ ಸಂಜೆ, ವಿಜ್ಞಾನ ವಸ್ತು ಪ್ರದರ್ಶನ, ಆಹಾರ ಮೇಳ, ಕರಕುಶಲ ಮೇಳ, ವಿಜ್ಞಾನ ಮಾದರಿಯಗಳ ಪ್ರದರ್ಶನ ಆಯೋಜಿಸಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದಲ್ಲಿ ಜೀವಮಾನ ಶ್ರೇಷ್ಠ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರತಿಜಿಲ್ಲೆಗೆ ಒಬ್ಬರಂತೆ 37 ಜನರಿಗೆ ರಾಜ್ಯಮಟ್ಟದಲ್ಲಿ ಹೆಚ್.ಎನ್.ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಬಾರಿ ವಿಶೇಷವಾಗಿ ಮಹಿಳಾ ಸಾಧಕರಿಯನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಚೈತನ್ಯಸ್ತ್ರೀ ಪ್ರಶಸ್ತಿಯನ್ನು ನೀಡಿ ಅಭಿನಂಧಿಸಲಾಗುವುದು ಎಂದರು.
ಪರಿಷತ್‍ನ ಜಿಲ್ಲಾಧ್ಯಕ್ಷ ಬಿ.ಡಿ.ರವಿಕುಮಾರ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯಿಂದ ಸಾಹಿತ್ಯ, ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್‍ನ ಅಧ್ಯಕ್ಷ ಡಿ.ಮಂಜುನಾಥ್ ಅವರಿಗೆ ರಾಜ್ಯಮಟ್ಟದ ಹೆಚ್‍ಎನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದರು.
ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ಘಾಟಿಸಲು ಆಹ್ವಾನಿಸಲಾಗಿದೆ. ಉಪಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯದ ಮಂತ್ರಿಗಳು, ಶಾಸಕರು ವಿಧಾನಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಸಾಮಾಜಿಕ ಚಿಂತಕರು, ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಭಾಗವಹಿಸಲಿದ್ದಾರೆ. ವೈಜ್ಞಾನಿಕ, ವೈಚಾರಿಕ ಚಿಂತಕರ ನೆಲೆಯಾಗಿರುವ ಶಿವಮೊಗ್ಗ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ವೈಜ್ಞಾನಿಕ ಸಮ್ಮೇಳನಕ್ಕೆ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪರಿಷತ್ತ್‍ನ ರಾಜ್ಯ ನಿರ್ದೇಶಕರಾದ ದೇವಿಕಾ ನಟರಾಜ್, ಪ್ರಮುಖರಾದ ಸೂರ್ಯ ಪ್ರಕಾಶ್, ಸೀಮಾ ಸೇರಾವ್, ಸಿ.ಮೂರ್ತಿ, ಜ್ಯೋತಿ ಮಣೂರು, ನಾರಾಯಣ ಎ.ಎಸ್., ಜಯಪ್ಪ, ದೇವೇಂದ್ರಪ್ಪ, ಶಿವಮೂರ್ತಿ, ಚಂದ್ರನಾಯಕ, ವಿರೂಪಾಕ್ಷ ಎಸ್.ಡಿ. ಮುಂತಾದವರು ಇದ್ದರು.