ಶಿವಮೊಗ್ಗ : ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನಲ್ಲಿರುವ ಖಾಸಗಿ ವಸತಿಗೃಹದಲ್ಲಿ ಶಿರಸಿ ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ್ (33) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಲಾಡ್ಜ್‌ಗೆ ಬಂದು ರೂಮ್ ಮಾಡಿಕೊಂಡಿದ್ದ ಜಿತೇಂದ್ರ 7 ಗಂಟೆ ಸುಮಾರಿಗೆ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ.
ಸುಮಾರು 5 ವರ್ಷದಿಂದ ಹೊಸನಗರ ಪಟ್ಟಣದಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಜಿತೇಂದ್ರ ವಿಪರೀತ ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.