ಶಿವಮೊಗ್ಗ:ಡಿ.12 ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಸಿ.ಬಿ.ಆರ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಡಿ.13 ರ ಶುಕ್ರವಾರ ಬೆಳಗ್ಗೆ 10:30 ಕ್ಕೆ ಚಂದನ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ‘ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತರ ಪಾತ್ರ’ ಕುರಿತಾಗಿ ಕರ್ನಾಟಕ ಉಪಲೋಕಾಯುಕ್ತರಾದ
ನ್ಯಾ.ಕೆ.ಎನ್.ಫಣೀಂದ್ರ ಮಾತನಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಕಾಲೇಜಿನ ಪ್ರಾಂಶುಪಾಲೆ ಡಾ.ಎ.ಅನಲ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.