ಶಿವಮೊಗ್ಗ,ಡಿ12: ಬಾಕ್ಸಿಂಗ್ ಒಂದು ಸಾಹಸ ಕ್ರೀಡೆಯಾಗಿದ್ದು, ಪ್ರಪಂಚದಾದ್ಯ0ತ ಈ ಕ್ರೀಡೆಗೆ ತುಂಬ ಪ್ರೋತ್ಸಾಹ ಸಿಗುತ್ತಿದೆ. ಭಾರತದಲ್ಲೂ ಕೂಡ ಇದು ಜನಪ್ರಿಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಅವರು ಇಂದು ನಗರದ ನೆಹರೂ ಒಳಾಂಗಣದ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರು ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರು ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಜಿಲ್ಲೆಯಲ್ಲೇ ಮೊದಲ ಬಾರಿಗೆ ಹಮ್ಮಿಕೊಂಡಿದ್ದ 18 ವರ್ಷ ಮೇಲ್ಪಟ್ಟವರ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಈ ಕ್ರೀಡಾ ಕೂಟಕ್ಕೆ ಆಗಮಿಸಿದ ಎಲ್ಲಾ ಕ್ರೀಡಾಪಟುಗಳಿಗೆ ನಾನು ಸ್ವಾಗತ ಬಯಸುತ್ತೇನೆ ಮತ್ತು ಶುಭ ಹಾರೈಸುತ್ತೇನೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದವರು ರಾಷ್ಟç ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಹೆಸರು ಗಳಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವರಾಜ್ ನಾಯಕ್ ವಹಿಸಿದ್ದರು.
100 ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿ 10 ವಿವಿಧ ತೂಕದ ವಿಭಾಗಗಳ ಸ್ಪರ್ಧೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕೆ.ಇ.ಕಾಂತೇಶ್, ಡಿವೈಎಸ್‌ಪಿ, ಕರ್ನಾಟಕ ಅಮೆಚೂರು ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಾಹಿ ಸತೀಶ್, ಕ್ರೀಡಾಧಿಕಾರಿ ರೇಖ್ಯಾನಾಯಕ್, ಕ್ಯಾಪ್ಟನ್ ಚಂದ್ರಶೇಖರ್, ಮೀನಾಕ್ಷಿ, ಸಹಕಾರ್ಯದರ್ಶಿ ವಿನೋದ್ ಮತ್ತಿತರರು ಇದ್ದರು.