ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡುವ ಉದ್ದೇಶದಿಂದ ಹೊಸ ಮರಳು ನೀತಿ ಪ್ರಕಟಿಸಲಾಗುವುದು ಎಂದು ಗಣಿಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಮತ್ತು ಇತರ ಸಣ್ಣಪುಟ್ಟ ವಸತಿ ಯೋಜನೆಗಳಿಗೆ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.
ಪ್ರತಿಯೊಬ್ಬರಿಗೂ ಸುಲಭವಾಗಿ ಮತ್ತು ಕಡಿಮೆ ದರದಲ್ಲಿ ಮರಳು ಸಿಗಬೇಕು. ಗಣಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಕಿರುಕುಳ ಆಗುತ್ತಿರುವ ಕಿರುಕುಳವನ್ನು ತಪ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಈ ರೀತಿ ತೆಗೆದ ಮರಳನ್ನು ಸ್ವಂತ ಮನೆ ಅಥವಾ ಕಟ್ಟಡಗಳಿಗೆ ಮಾತ್ರ ಉಪಯೋಗಿಸಬೇಕು. ಅದನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆಯ ವ್ಯಾಪ್ತಿಯಲ್ಲಿ ಎತ್ತಿನ ಬಂಡಿ, ಟಾಮ್ ಟಾಮ್, ದ್ವಿಚಕ್ರ ವಾಹನ ಮತ್ತು ಕತ್ತೆಗಳ ಮೇಲೆ ಮಾತ್ರ ಸಾಗಿಸಬಹುದು. ಹೊರ ಜಿಲ್ಲೆಗಳಿಗೆ ಸಾಗಿಸುವುದಕ್ಕೆ ಅವಕಾಶವಿಲ್ಲ ಎಂದು ಹೇಳಿದರು.

By admin

ನಿಮ್ಮದೊಂದು ಉತ್ತರ

error: Content is protected !!