ಶಿವಮೊಗ್ಗ,ಡಿ12: ಇಲ್ಲಿಯ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಡಿ.14ರಂದು ಬೆಳಿಗ್ಗೆ 10_30ಕ್ಕೆ ಕುವೆಂಪು ವಿಶ್ವವಿದ್ಯಾಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಯೋಗ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಕಾಲೇಜಿನ ಐಕ್ಯುಎಸಿ ಸಂಯೋಜನಾಧಿಕಾರಿ ಡಾ.ಓಂಕಾರಪ್ಪ, ದೈ.ಶಿ.ನಿರ್ದೇಶಕಿ ವಿದ್ಯಾಶ್ರೀ ಬಿ.ಕೆ.ಉಪಸ್ಥಿತರಿರುವರು. ಪ್ರಾಚಾರ್ಯ ಡಾ.ಆರ್.ಎಂ.ಜಗದೀಶ ಅಧ್ಯಕ್ಷತೆ ವಹಿಸುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!