ಶಿವಮೊಗ್ಗ: ಡಿಸೆಂಬರ್ 12: ೨೦೨೪-೨೫ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ೨೦೨೩ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾ./ಪ. ಪಂ. ಗಳ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ಕ್ರೀಡಾಪಟುಗಳು ಅರ್ಜಿಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. ೨೧ ರೊಳಗಾಗಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.


ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:೦೮೧೮೨-೨೨೩೩೨೮ ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!