ಡಿ.13 :
ಹೊಸನಗರ: ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರ ಬಹುಕಾಲದ ಸಮಸ್ಯೆಯ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರನ್ನು ಶಿವಮೊಗ್ಗ ಜಿಲ್ಲೆಯ ಲೋಕಸಭೆ
ಸದಸ್ಯರಾದ ಬಿ.ವೈ ರಾಘವೇಂದ್ರ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಮಾಜೀ ಸಚಿವರಾದ ಹರತಾಳು ಹಾಲಪ್ಪನವರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಕೆ.ಬಿ.ಅಶೋಕ ನಾಯ್ಕರವರನ್ನು
ಒಳಗೊಂಡ ಜಿಲ್ಲೆಯ ನಿಯೋಗ ದೆಹಲಿಯ ಹೊಸ ಸಂಸತ್ ಭವನದಲ್ಲಿ ಬೇಟಿಯಾಗಿ ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ಕುರಿತು ಮಾತುಕತೆ ನಡೆಸಿದರು.