ಶಿವಮೊಗ್ಗ.ಡಿ17 ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ
ಶರಾವತಿ ನಗರದ “ಶ್ರೀ ಕಾಲ ಬೈರವೇಶ್ವರಸ್ವಾಮಿ ದೇವಾಲಯ” ದಲ್ಲಿ ಎರಡನೇ ದಿನದ ಧನುರ್ಮಾಸದ ಪ್ರಯುಕ್ತ ಆಯೋಜಿಸಲಾಗಿದ್ದ ಪಂಚಾಮೃತ ಅಭಿಷೇಕ,ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ
ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಮಠದ ಪೂಜ್ಯ ಶ್ರೀ ಶ್ರೀ ಸಾಯಿನಾಥ ಸ್ವಾಮಿಜಿಯವರು, ಗಣ್ಯರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಶ್ರೀಮಠದ ಸದ್ಭಕ್ತರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇನ್ನೂ ಮುಂತಾದವರು ಉಪಸ್ಥಿತರಿದ್ದರು.