ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವು ಕಂಡಿರುವ ಘಟನೆ ವರದಿಯಾಗಿದೆ.
ವಿದ್ಯಾನಗರದ ನಂಜಪ್ಪ ಲೇಔಟ್ ನಲ್ಲಿರುವ ಕಾಲೇಜ್ ನಲ್ಲಿ ಪ್ರಜ್ಞೆ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಬಿದ್ದು ವಿದ್ಯಾರ್ಥಿನಿ ಸಾವು ಕಂಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಪ್ರೌಢ ಶಾಲೆಯ ಶಿಕ್ಷಕರು ಕಾಲೇಜಿಗೆ ಬಂದ ಹಿನ್ನಲೆ ಮಾತಾಡಿಸಲೆಂದು ಪ್ರಿನ್ಸಿಪಾಲ್ ಕಚೇರಿಗೆ ಬರುತ್ತಿದ್ದ ವೇಳೆ ಲೋ ಬಿಪಿಯಿಂದ ಮೂರ್ಛೆ ತಪ್ಪಿ ಬಿದ್ದಿದ್ದಾಳೆ. ತತ್ ಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು.