ಶಿವಮೊಗ್ಗ ಡಿ.19 :ಬೆಳಗಾವಿ : ಗೌರವಧನ ಹೆಚ್ಚಳ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಮಂಗಳವಾರ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಆಗ್ರಹಿಸಿ ಸುವರ್ಣ ವಿಧಾನಸೌಧದ ಎದುರು ಧರಣಿ ನಿರತರಿಗೆ ಮೂಲ ಸೌಕರ್ಯ ಒದಗಿಸದ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಡಾ. ಧನಂಜಯ ಸರ್ಜಿ ಅವರು ಹರಿಹಾಯ್ದರು.
ಚಳಿಗಾಲದ ವಿಧಾನ ಪರಿಷತ್ 154 ನೇ ಅಧಿವೇಶನದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅತಿಥಿ ಉಪನ್ಯಾಸಕ ರಿಂದ ಅಹವಾಲು ಸ್ವಿಕರಿಸಿ ಅವರ ಜೊತೆ ಮಾತನಾಡುತ್ತಿರುವ ವೇಳೆ ಅತಿಥಿ ಉಪನ್ಯಾನಕಿಯೊಬ್ಬರು ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದರು. ವೈದ್ಯಾನಾಗಿ ಅವರಿಗೆ ಅಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಆಬ್ಯೂಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ತುರ್ತು ಸೇವೆಯ 108 ಆಬ್ಯೂಲೆನ್ಸ್ ನಲ್ಲಿ ಯಾವುದೇ ಜೀವರಕ್ಷಕ ಸೌಲಭ್ಯಗಳು ಇರದಿರುವುದು, ಸಕ್ಕರೆ ಖಾಯಿಲೆ ಪರೀಕ್ಷೆ ಮಾಡುವ ಯಂತ್ರ ಹಾಳಾಗಿರುವುದು…
ಮಾಸಿಕ ಗೌರವ ಧನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಚಳಿಗಾಲದ 154 ನೇ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದ ಎದುರು ಬುಧವಾರ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರಿಂದ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಅಹವಾಲು ಸ್ವೀಕರಿಸಿ, ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳಯುವುದಾಗಿ ಭರವಸೆ ನೀಡಿದರು, ನೂರಾರು ಅತಿಥಿ ಶಿಕ್ಷಕರು ಹಾಜರಿದ್ದರು.