ಶಿವಮೊಗ್ಗ : ಮೊಬೈಲ್ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾಳೆ.
ಹಾರನಹಳ್ಳಿಯ ಧನುಶ್ರೀ (೨೦) ಮೃತ ವಿದ್ಯಾರ್ಥಿನಿ. ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.