ಬೆಂಗಳೂರು,ಡಿ.27: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಖಜಾಂಚಿ ಸ್ಥಾನದ ಮತದಾನದ ಎಣಿಕೆ ಇಂದು ನಡೆದಿದ್ದು ಅಧ್ಯಕ್ಷರಾಗಿ ಮತ್ತೆ ಶಿವಮೊಗ್ಗ ಮೂಲದ ಸಿಎಸ್ ಷಡಾಕ್ಷರಿ ಅವರು ಆಯ್ಕೆ ಆಗುವ ಮೂಲಕ ಕುತಂತ್ರಗಳು ಹಾಗೂ ರಾಜಕೀಯದ ಆಟದ ನಡುವೆ ಜಯ ಸಾಧಿಸಿರುವುದು ವಿಶೇಷವಾಗಿದೆ.
ಸಿ ಎಸ್ ಷಡಾಕ್ಷರಿ ಅವರು ಹಿಂದೆ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗುವ ಮೂಲಕ ಅವರು ರಾಜ್ಯ ಸರ್ಕಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಅವರ ವಿರುದ್ಧ ಸ್ಪರ್ಧಿಸಿದ್ದ ಬಿ.ಪಿ. ಕೃಷ್ಣೇಗೌಡ 442 ಮತ ಪಡೆದು ಪರಾಭವಗೊಂಡಿದ್ದಾರೆ.
ರಾಜ್ಯ ಖಜಾಂಚಿ ಸ್ಥಾನಕ್ಕೆ ವಿ.ವಿ. ಶಿವರುದ್ರಯ್ಯ 485 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಾಗರಾಜ ಆರ್. ಜುಮ್ಮನ್ನವರ 467 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾ ಅಧಿಕಾರಿಯಾಗಿ ಹನುಮನರಸಯ್ಯ ಕಾರ್ಯನಿರ್ವಹಿಸಿದ್ದರು. 2024 -2029ನೇ ಅವಧಿಯ ರಾಜ್ಯಾಧ್ಯಕ್ಷ ಸ್ಥಾನ, ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಸಿ.ಎಸ್. ಷಡಾಕ್ಷರಿ ಅಧ್ಯಕ್ಷರಾಗಿ, ಶಿವರುದ್ರಯ್ಯ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಲಾಗಿದೆ.