ಕಾರ್ಗಲ್: ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದ್ದರಿಂದ ಜ.1ರಿಂದ ಮಾರ್ಚ್ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಈಚೆಗೆ ಆದೇಶ ಹೊರಡಿಸಿದ್ದರು.