ಶಿವಮೊಗ್ಗ ; ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ನಂತರ ರಥವನ್ನು ಎಳೆಯುವ ಮೂಲಕ ಪುನೀತರಾದರು.
ಇಂದು ರಾಮೇಶ್ವರ ದೇವಸ್ಥಾನದ ಅವರಣದಿಂದ ರಥವನ್ನು ಗಾಂಧಿಚೌಕದವರೆಗೆ ರಥಬೀದಿಯಲ್ಲಿ ಎಳೆಯಲಾಯಿತು.
ರಥೋತ್ಸವದ ವೇಳೆ ಅಡಕೆ ಹೊಸ ಫಸಲನ್ನು ರಥದತ್ತ ಭಕ್ತರು ತೂರಿದರು. ರಥಕ್ಕೆ ತಾಗಿ ಕೆಳಗೆ ಬೀಳುತ್ತಿದ್ದ ಅಡಕೆ ಫಸಲನ್ನು ಪ್ರಸಾದದ ರೂಪದಲ್ಲಿ ಸ್ವೀಕರಿಸಿದರು.
ರಥೋತ್ಸವಕ್ಕೂ ಮೊದಲು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಭಾರೀ ಸಂಖ್ಯೆಯ ಭಕ್ತರು ಸೇರಿದ್ದರು. ಈ ವೇಳೆ ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ ನೆರವೇರಿಸಲಾಯಿತು.