ಶಿವಮೊಗ್ಗ ಜ.01:: ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಆಧುನಿಕ ತಂತ್ರಜ್ಞಾನ ಮೂಲಕ ಗುಣಮಟ್ಟದ ಶಿಕ್ಷಣ ಅವಕಾಶ ಮತ್ತು ಸವಾಲುಗಳು ಕುರಿತಾಗಿ ಜ.2 ಮತ್ತು 3 ರಂದು ಎರಡು ದಿನಗಳ ಕಾಲ ಕಾಲೇಜಿನ ಎಸ್.ವಿ.ಕೃಷ್ಣಮೂರ್ತಿರಾವ್‌ ಸಭಾಂಗಣದಲ್ಲಿ ರಾಷ್ಟ್ರಮಟ್ಟದ ವಿಚಾರಸಂಕಿರಣ ಏರ್ಪಡಿಸಲಾಗಿದೆ.

ಜ.2 ರ ಗುರುವಾರ ಬೆಳಗ್ಗೆ 10:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಐಐಟಿ ಧಾರವಾಡದ ಸಲಹೆಗಾರರು ಹಾಗೂ ಅತಿಥಿ ಪ್ರಾಧ್ಯಾಪಕರಾದ ಪ್ರೊ.ಕೆ.ವಿ.ಜಯಕುಮಾರ್‌ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುವೆಂಪು ವಿಶ್ವವಿದ್ಯಾಲಯದ ಪರಿಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎನ್.ಗೋಪಿನಾಥ, ಮೈಸೂರು ವಿಶ್ವವಿದ್ಯಾಲಯದ  ಶಿಕ್ಷಣಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ  ಪ್ರೊ.ಶೀಲಾ.ಜಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌, ಕಾರ್ಯದರ್ಶಿ ಎಸ್.ಎನ್.ನಾಗರಾಜ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಅಧ್ಯಕ್ಷತೆ ವಹಿಸಲಿದ್ದು, ಸಂಯೋಜಕ ಡಾ.ಎನ್.ಡಿ.ಮಂಜು ಉಪಸ್ಥಿತರಿರಲಿದ್ದಾರೆ.

ಜ.3 ರ ಶುಕ್ರವಾರ ಮಧ್ಯಾಹ್ನ 3:30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೈಸೂರು ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ.ನಿಂಗಮ್ಮ.ಸಿ.ಬೆಟಸೂರು ಸಮಾರೋಪ ಮಾತುಗಳನ್ನಾಡಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಭಾಗವಹಿಸಲಿದ್ದಾರೆ.

ಎರಡು ದಿನಗಳ ವಿಚಾರಸಂಕಿರಣದಲ್ಲಿ ವಿವಿಧ ಗೋಷ್ಟಿಗಳು ನಡೆಯಲಿದ್ದು, ಆಧುನಿಕ ತಂತ್ರಜ್ಞಾನ ಮತ್ತು ಶಿಕ್ಷಣ ಕುರಿತಾಗಿ ಕುವೆಂಪು ವಿವಿ ಶಿಕ್ಷಣಶಾಸ್ತ್ರ ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಜಗನ್ನಾಥ ಡಾಂಗೆ ಮಾತನಾಡಲಿದ್ದು, ವ್ಯಕ್ತಿತ್ವ ವಿಕಸನಕ್ಕೆ ತಂತ್ರಜ್ಞಾನದ ಪ್ರಭಾವ ಕುರಿತಾಗಿ ಮೈಸೂರು ವಿವಿ ಶಿಕ್ಷಣಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪುಷ್ಪಾ.ಎಂ, ತಂತ್ರಜ್ಞಾನದ ಮೂಲಕ ಅನೌಪಚಾರಿಕ ಕಲಿಕೆ ಕುರಿತಾಗಿ ಕುವೆಂಪು ವಿವಿ ಶಿಕ್ಷಣಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎಸ್.ಎಸ್.ಪಾಟೀಲ್‌ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ರಾಜ್ಯದ ಸಂಶೋಧನಾರ್ಥಿಗಳು, ಉಪನ್ಯಾಸಕರು ಭಾಗವಹಿಸಲಿದ್ದು, 140 ಕ್ಕು ಹೆಚ್ಚು ಸಂಶೋಧನಾ ಪ್ರಬಂಧಗಳು ಮಂಡನೆಯಾಗಲಿದೆ ಎಂದು ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!