ಶಿವಮೊಗ್ಗ,ಜ.೧: ನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ, ಯುವಕ ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಸಿದ್ದಯ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗೋಪಾಳದ ನಿವಾಸಿ ಧನುಷ್ (೨೦) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಪ್ರಜ್ವಲ್ (೨೧) ಗಾಯಗೊಂಡ ಯುವಕನಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಆದರೆ ಕಾರಿನಲ್ಲಿದ್ದವರು ಅನಾಹುತದಿಂದ ಪಾರಾಗಿದ್ಧಾರೆ. ಇವರು ಸಾಗರ ರಸ್ತೆಯ ಪೊಲೀಸ್ ಲೇಔಟ್ ಸಮೀಪದ ನಿವಾಸಿಗಳೆಂದು ಹೇಳಲಾಗಿದೆ

.
ತಡರಾತ್ರಿಯೇ ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ಕುರಿತಂತೆ ಇನ್ನಷ್ಟೆ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಬೇಕಾಗಿದೆ.
ಅದೇ ರೀತಿ ನಗರದ ರಾಯಲ್ ಆರ್ಕಿಡ್ ಹೋಟೆಲ್ ಸಮೀಪ ಇಂದು ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆ ಓರ್ವರು ಮೃತಪಟ್ಟ ಘಟನೆ ನಡೆದಿದೆ.


ರೇಣುಕಮ್ಮ (೭೦) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟೆ ಟ್ರಾಫಿಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಬೇಕಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!